ತರೀಕೆರೆ ಹಳಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲಿಸಿದರು. ಡಿ.ಎಸ್.ಸುರೇಶ್, ಬೆಳ್ಳಿ ಪ್ರಕಾಶ್, ಎಂ.ಆರ್.ದೇವರಾಜ್ ಶೆಟ್ಟಿ, ಟಿ.ಎಲ್.ರಮೇಶ್, ಗರಗದಹಳ್ಳಿ ಪ್ರತಾಪ್ ಇತರರಿದ್ದರು. 
ಚಿಕ್ಕಮಗಳೂರು

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ

ಎಸ್.ಎನ್.ರವೀಂದ್ರ

ಪ್ರಮುಖ ಮುಖ್ಯಾಂಶಗಳು

  • ಪಿಡಬ್ಲುೃಡಿ ಅಧಿಕಾರಿಗಳ ವಿರುದ್ಧ
  • ಕ್ರಮಕ್ಕೆ ಭರವಸೆ ನೀಡಿದ ಎಂಪಿ
ತರೀಕೆರೆ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ಇತ್ತೀಚೆಗಷ್ಟೇ ಅಭಿವೃದ್ಧಿಪಡಿಸಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಬಿದ್ದಿದ್ದು, ಕೋಟ್ಯಾಂತರ ರೂಪಾಯಿ ಮೊತ್ತದ ಕಾಮಗಾರಿಯಲ್ಲಿ ಕಳಪೆಯಾಗಿರುವುದು ಮೇಲ್ನೋಟಕ್ಕೆ ಗೋಚರಿಸಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 
ಹಳಿಯೂರು ಬಳಿ ಗುಂಡಿಬಿದ್ದು ಹಾಳಾಗಿರುವ ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿ ಮಾತನಾಡಿ, ಕೇಂದ್ರ ಸರ್ಕಾರದ 4.30 ಕೋಟಿ ರೂ. ಅನುದಾನ ಲೋಕೋಪಯೋಗಿ ಇಲಾಖೆಗೆ ವರ್ಗಾವಣೆಯಾಗಿದೆ. ಐದಾರು ವರ್ಷ ಬಾಳಿಕೆ ಬರಬೇಕಿದ್ದ ರಸ್ತೆ ಕಾಮಗಾರಿಯನ್ನು ಪಿಡಬ್ಲುೃಡಿ ಕಳಪೆಯಾಗಿ ಮಾಡಿದೆ. ಕಾಮಗಾರಿಯಲ್ಲಿ ಬೇಜವಾಬ್ದಾರಿ ವಹಿಸಿರುವ ಅಧಿಕಾರಿಗಳ ಜತೆ ತಪ್ಪಿತಸ್ಥರೆಲ್ಲರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ತಿಳಿಸಿದರು.
ಕಳಪೆ ಕಾಮಗಾರಿಯಲ್ಲಿ ಹಣ ದುರುಪಯೋಗವಾಗಿದೆ ಎಂದು ಹೇಳಲಾಗುತ್ತಿದ್ದು, ಅಗತ್ಯವಾದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪಾರದರ್ಶಕ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು. 
ಮಾಜಿ ಶಾಸಕರಾದ ಡಿ.ಎಸ್.ಸುರೇಶ್, ಬೆಳ್ಳಿ ಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್.ರಮೇಶ್, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಜಿ.ಎಸ್.ವಸಂತ್‌ಕುಮಾರ್ ಮತ್ತಿತರರಿದ್ದರು.