ಫೋಟೋ: ೧೮ ಸಿಕೆಎಂ ೫ ಚಿಕ್ಕಮಗಳೂರಿನ ಜಿಪಂ ಮಿನಿ ಸಭಾಂಗಣದಲ್ಲಿ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಚ್.ಎಸ್.ಕೀರ್ತನಾ, ಸಮೀವುಲ್ಲಾ, ಕೃಷ್ಣೇಗೌಡ, ಮಂಜುನಾಥ್, ಹೇಮಾವತಿ ಮತ್ತಿತರರಿದ್ದರು. 
ಚಿಕ್ಕಮಗಳೂರು

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ

ನಿತ್ಯಾನಂದ ಎಸ್.ಎನ್.
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ ಆರಂಭವಾಗಲಿದ್ದು, ಯಾರಿಗೂ ಭಯ ಬೇಡ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ತಿಳಿಸಿದರು.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ೧,೮೭೭ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಕೆಲವು ಇಲಾಖಾಧಿಕಾರಿಗಳನ್ನು ಪರಿವೀಕ್ಷಕರನ್ನಾಗಿ ನೇಮಿಸಲಾಗಿದೆ. ಅವರೊಂದಿಗೆ ಜಿಲ್ಲೆಯ ಎರಡು ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ, ವಾರ್ಡ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಸೇರಿ ಪರಿಷ್ಕರಣೆ ಆರಂಭಿಸಲಿದ್ದಾರೆ. ಪರಿಷ್ಕರಣೆಗೆ ಬರುವ ಮುನ್ನವೇ ಫಲಾನುಭವಿಗಳು ಸಲ್ಲಿಸಬೇಕಾದ ದಾಖಲಾತಿ ಮತ್ತಿತರ ವಿಷಯಗಳನ್ನು ತಿಳಿಸಲಾಗುವುದು. ಜಿಲ್ಲೆಯ ೨.೬೨ ಲಕ್ಷ ಯಜಮಾನಿಯರ ಮನೆ ಮನೆಗೆ ತೆರಳಿ ಪರಿಷ್ಕರಣೆ ನಡೆಸಲಾಗುವುದು ಎಂದರು.
ಪರಿಷ್ಕರಣೆಯ ವಿಧಾನಗಳನ್ನು ಸಭೆಗೆ ವಿವರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ೩೨ ಕಂತುಗಳ ಮೂಲಕ ಜಿಲ್ಲೆಗೆ ಈವರೆಗೆ ೧,೬೨೭ ಕೋಟಿ ರೂ. ನೀಡಲಾಗಿದೆ ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಯೋಗಾನಂದ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಇ-ಕೆವೈಸಿ ಮಾಡಿಸಲು ಅಕ್ಟೋಬರ್ ೨೦ ರವರೆಗೆ ಸಮಯ ನೀಡಲಾಗಿದ್ದು, ಈಗಾಗಲೇ ಇ-ಕೆವೈಸಿ ಯಾರಿಗೆಲ್ಲ ಮಾಡಿಸಬೇಕೆಂಬ ಮಾಹಿತಿಯನ್ನು ಪಡಿತರ ವಿತರಣಾ ಶಾಖೆಗಳ ಮೂಲಕ ತಿಳಿಸಲಾಗಿದೆ. ಕೆಲಸ ಮತ್ತು ಶಾಲೆಗಳಿಗೆ ಹೋದವರಿಗೆ ತೊಂದರೆ ಆಗಬಾರದೆಂದು ರಾತ್ರಿ ೮ ಗಂಟೆಯವರೆಗೆ ಇ-ಕೆವೈಸಿ ನಡೆಸಲಾಗುವುದು ಎಂದು ಹೇಳಿದರು.
ಗೃಹಜ್ಯೋತಿ ಪರಿಷ್ಕರಣೆ ಶೇ. ೯೦ ರಷ್ಟು ನಡೆದಿದ್ದು, ೩೦೦೦ಕ್ಕೂ ಹೆಚ್ಚು ಫಲಾನುಭವಿಗಳು ಯೋಜನೆಯನ್ನು ಸ್ವಇಚ್ಚೆಯಿಂದ ಯೋಜನೆಯಿಂದ ಹೊರಗೆ ಉಳಿದಿದ್ದು, ೮ ರಿಂದ ೧೦ ಸಾವಿರ ಮನೆಗಳಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಒದಗಿಸಲಾಗುತ್ತಿದೆ. ಪರಿಷ್ಕರಣೆ ಸಮಯದಲ್ಲಿ ಡೋರ್ಲಾಕ್ ಇತ್ಯಾದಿ ಕಾರಣಗಳಿಗೆ ಪರಿಷ್ಕರಣೆ ಆಗಿಲ್ಲವೋ ಅವರು ಸೆಪ್ಟೆಂಬರ್ ೩೦ರೊಳಗೆ ಇಲಾಖೆಯ ಸಂಪರ್ಕದೊAದಿಗೆ ಪರಿಷ್ಕರಣೆ ಮಾಡಿಸಿಕೊಳ್ಳಬೇಕು ಎಂದು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.
ಶಕ್ತಿ ಯೋಜನೆ ಅಧಿಕಾರಿ ಪ್ರದೀಪ್ ಅವರು ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಈವರೆಗೆ ೭.೩೮ ಲಕ್ಷ ಟ್ರಿಪ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಅದಕ್ಕಾಗಿ ಸರ್ಕಾರ ೨೯೦ ಕೋಟಿ ರೂ.ಗಳನ್ನು ಭರಿಸಿದೆ. ಯುವನಿಧಿ ಯೋಜನೆಯ ಬಗ್ಗೆ ಇಲಾಖಾ ಅಧಿಕಾರಿ ಖಲಂದರ್ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯ ಸುಮಾರು ೨೦೦೦ ಪದವಿ ಹಾಗೂ ಡಿಪ್ಲೂಮಾ ಪದವೀಧರರಿಗೆ ಈವರೆಗೆ ೧೮ ಕೋಟಿ ರೂ.ಗಳನ್ನು ಸರ್ಕಾರ ನೀಡಿದೆ ಎಂದರು.
ಜಿಪA ಸಿಇಒ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎಸ್.ಕೀರ್ತನಾ ಮಾತನಾಡಿ, ಭಾರತ್ ಜೋಡೋ ಯುವಕ ಸಂಘಗಳ ರಚನೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಗ್ಯಾರಂಟಿ ಸಮಿತಿಗಳ ಸದಸ್ಯರು ಹೆಚ್ಚು ಕಾಳಜಿಯಿಂದ ಮುಂದಾಗಬೇಕು. ಈ ಸಂಘಗಳು ಯುವಕರನ್ನು ಮುಖ್ಯವಾಹಿನಿಗೆ ತರುವಲ್ಲಿ ಅತೀ ಮುಖ್ಯವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಡಾ.ಸಿ.ರಮೇಶ್ ಅವರು ಸಂಘಗಳ ರಚನೆ ಇತ್ಯಾದಿ ವಿಚಾರವನ್ನು ಸಭೆಗೆ ತಿಳಿಸಿದರು.
ಒಟ್ಟಾರೆ ಜಿಲ್ಲೆಗೆ ಕಳೆದ ೩ ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು ೧೦ ಲಕ್ಷ ಫಲಾನುಭವಿಗಳಿಗೆ ೨೭೬೫ ಕೋಟಿ ರೂ.ಗಳು ರಾಜ್ಯ ಸರ್ಕಾರದಿಂದ ಕೊಡ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್ ತಿಳಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಸಮೀವುಲ್ಲಾ, ಮಂಜುನಾಥ, ಕೃಷ್ಣೇಗೌಡ, ಸದಸ್ಯರಾದ ಚಂದ್ರಮೌಳಿ, ಹೇಮಾವತಿ ಹಾಗೂ ತಾಲೂಕು ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.