ಚಿಕ್ಕಮಗಳೂರು ಬೈಪಾಸ್ ರಸ್ತೆಯ ತುಳಸಿ ಬಡಾವಣೆಯಲ್ಲಿ ನಿರ್ಮಿಸಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಭವನದ ಉದ್ಘಾಟನೆಯನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಎಂಎಲ್‌ಸಿ ಎಸ್.ಎಲ್.ಭೋಜೇಗೌಡ, ಆರತಿ ಕೃಷ್ಣ ಮತ್ತಿತರರಿದ್ದರು. 
ಚಿಕ್ಕಮಗಳೂರು

ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಿ ಮಾದರಿಯಾದ ಮಹಿಳೆಯರು

ಪ್ರಮುಖ ಮುಖ್ಯಾಂಶಗಳು

  • ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದÀನಾಥ ಸ್ವಾಮೀಜಿ ಅಭಿಮತ
  • ಅಧಿಕಾರವಧಿಯಲ್ಲಿ ಶಾಶ್ವತವಾಗಿರುವ ಕಾಯಕ ಕೈಗೊಂಡಾಗ ಮಾತ್ರ ಧರ್ಮ ಸಂಗ್ರಹದ ಮೂಲಕ ಸಮಾಜದಲ್ಲಿ ಹೆಸರು ಉಳಿಯುತ್ತದೆ
ಚಿಕ್ಕಮಗಳೂರು: ಶರೀರ, ಸಂಪತ್ತು, ಸಾವು ಇವು ಶಾಶ್ವತವಲ್ಲ, ಸಿಕ್ಕಿದ ಅಧಿಕಾರವಧಿಯಲ್ಲಿ ಶಾಶ್ವತವಾಗಿರುವ ಕಾಯಕ ಕೈಗೊಂಡಾಗ ಮಾತ್ರ ಧರ್ಮ ಸಂಗ್ರಹದ ಮೂಲಕ ಸಮಾಜದಲ್ಲಿ ಹೆಸರು ಉಳಿಯುತ್ತದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ನಗರದ ಬೈಪಾಸ್ ರಸ್ತೆಯ ತುಳಸಿ ಬಡಾವಣೆಯಲ್ಲಿ ನಿರ್ಮಿಸಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಭವನದ ಉದ್ಘಾಟನೆ ನೆರೆವೇರಿಸಿ ಬಳಿಕ ನಗರದ ವಿಜಯಪುರದ ಜಿಲ್ಲಾ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
ಸೇವಾ ಮತ್ತು ಧರ್ಮದ ಮಾರ್ಗವಾಗಿ ಸಂಘಟನೆಗಳು ಬೆಳೆಯಬೇಕು. ಜೊತೆಗೆ ಸೇವೆ ಮಾಡುವ ಉz್ದೆÃಶ ಇರದಿದ್ದರೆ ಹಾಗೂ ಶ್ರೇಷ್ಠವಾದ ತಾಯಂದಿರು ಇಲ್ಲದಿದ್ದರೆ ಸಮಾಜ ಬೆಳೆಯಲು ಅಸಾಧ್ಯ. ದೊಡ್ಡ ದೊಡ್ಡ ಸಮಸ್ಯೆಗಳು ಎದುರಾದಾಗ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪುರುಷನಿಗೆ ಸೂಕ್ತ ಸಲಹೆ ನೀಡುವ ತಾಯಂದಿರು ಮನೆಯಲ್ಲಿ ನಗುತ್ತಿದ್ದರೆ ಬದುಕಿನ ಭಾಗ್ಯ ಎಂದು ಭಾವಿಸುತ್ತೇನೆ ಎಂದರು.
ಭಾರತದಲ್ಲಿ ತಾಯಂದಿರಿಗೆ ದೇವತಾ ಸ್ಥಾನ ನೀಡಿ ಅಡುಗೆ ಮನೆಗೆ ಸೀಮಿತಗೊಳಿಸಿ ಹೆರಿಗೆ ಯಂತ್ರಗಳನ್ನಾಗಿ ಮಾಡಿz್ದÉÃವೆ. ಆದರೆ ಅಮೆರಿಕಾದಲ್ಲಿ ಪ್ರತಿಯೊಬ್ಬ ಮಹಿಳೆ ವಿದ್ಯಾವಂತರಾಗಿ ಆ ದೇಶದ ಉದ್ಧಾರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅಮೆರಿಕಾ ದೇಶದಲ್ಲಿ ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸುತ್ತಿದ್ದಾರೆ. ಅದೇ ಮಾದರಿಯಲ್ಲಿ ಜಿಲ್ಲಾ ಮಹಿಳೆಯರ ಒಕ್ಕಲಿಗರ ಸಂಘ ಸಮಾವೇಶದಂತೆ ಕಾರ್ಯಕ್ರಮ ಆಯೋಜನೆ ಮಾಡಿದ್ದೀರಿ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಬಹುದೊಡ್ಡ ಸಮುದಾಯ ಭವನ ಹುಟ್ಟುವ ಮೊದಲು ಜಿಲ್ಲಾ ಕೇಂದ್ರದಲ್ಲಿ ಒಕ್ಕಲಿಗರ ಸಮುದಾಯ ಭವನ ಸ್ಥಾಪನೆ ಮಾಡಲಾಗಿದೆ. ಮಹಿಳೆಯರು ಈ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿರುವುದು ಇದೊಂದು ಕಾರ್ಯಕ್ರಮವಲ್ಲ ಬದಲಾಗಿ ತಾಯಂದಿರ ಸಮಾವೇಶ ಎಂದು ಬಣ್ಣಿಸಿದರು.
ಜಿಲ್ಲಾ ಒಕ್ಕಲಿಗರ ಸಂಘ, ಮಹಿಳಾ ಒಕ್ಕಲಿಗರ ಸಂಘ ಹಾಲು-ಜೇನಿನಂತೆ ಬೆರೆತು ಸಮಾಜದಲ್ಲಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾತೃಸಂಘ ಮಹಿಳಾ ಸಂಘಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ಎಚ್.ಡಿ ತಮ್ಮಯ್ಯ ಮಾತನಾಡಿ, ಮಹಿಳೆ ಕುಟುಂಬದ ಆಧಾರ ಸ್ಥಂಭ. ಅವರ ಶಕ್ತಿ ಸಮಾಜದ ಅಭಿವೃದ್ಧಿಗಾಗಿ. ಪುರುಷನೊಬ್ಬ ಶಿಕ್ಷಣ ಪಡೆದರೆ ಒಬ್ಬ ವ್ಯಕ್ತಿ ಶಿಕ್ಷಣ ಪಡೆದಂತೆ. ಆದರೆ ಒಬ್ಬ ಮಹಿಳೆ ಶಿಕ್ಷಣ ಪಡೆದರೆ ಒಂದು ಶಾಲೆ ತೆರೆದಂತೆ. ಅದೇ ರೀತಿಯಲ್ಲಿ ಸಮಾಜದ ಪ್ರಗತಿ ಆ ಸಮಾಜದ ಮಹಿಳೆಯರ ಮೇಲೆ ಅವಲಂಭಿತವಾಗಿದೆ ಎಂದು ಹೇಳಿದರು.
ಒಕ್ಕಲಿಗ ಸಮುದಾಯ ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿದ್ದು, ಒಕ್ಕಲಿಗ ಸಮುದಾಯದ ಮಹಿಳೆಯರು ತಮ್ಮ ಪ್ರತಿಭೆಯ ಮೂಲಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶ ಮತ್ತು ರಾಜ್ಯದ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಮಹಿಳಾ ಅಭಿವೃದ್ಧಿಗಾಗಿ ಮಹಿಳಾ ಭವನ ನಿರ್ಮಾಣ ಮಾಡಲಾಗಿದ್ದು, ಇದು ಕೇವಲ ಕಟ್ಟಡವಾಗದೆ ಮಹಿಳೆಯರ ಜ್ಞಾನ ಸೌಧವಾಗಲಿ ಎಂದು ಆಶಿಸಿದರು.
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಮಾತನಾಡಿ, ಒಕ್ಕಲಿಗ ಸಮುದಾಯ ದೇಶಕ್ಕೆ ಅನ್ನದಾತನಾಗಿದ್ದು, ಬೆಂಗಳೂರು ನಗರವನ್ನು ಸುಂದರವಾಗಿ ನಿರ್ಮಾಣ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ. ಹೀಗಾಗಿಯೇ ಇಂದು ಮಹಾನಗರ ಇಂದು ಸಿಲಿಕಾನ್ ಸಿಟಿ ಎಂದು ಹೆಸುರುವಾಸಿಯಾಗಿದೆ ಹಾಗೂ ಉದ್ಯೋಗ ತಾಣವಾಗಿದೆ ಎಂದು ತಿಳಿಸಿದರು.
೧೯೭೩ರಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಹಿಂದುಳಿದ ಹಾಗೂ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಕ್ಷಾಟನೆ ಮಾಡುವ ಮೂಲಕ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಾರಂಭಿಸಿದರು. ಇಂದು ದೇಶ-ವಿದೇಶಗಳಲ್ಲಿ ೫೫೦ ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆ ನಿರ್ಮಾಣ ವಾಗಿದೆ ಎಂದು ಹೇಳಿದರು.
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿ ವರ್ಷ ೧.೬೦ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅದೇ ರೀತಿಯಲ್ಲಿ ಶ್ರೀ ಗುಣನಾಥ ಸ್ವಾಮೀಜಿ ಅವರು ಬಿಜಿಎಸ್ ಶಿಕ್ಷಣ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಯಾವುದೇ ಒಂದು ಜವಾಬ್ದಾರಿ ದೊರೆತರು ಅದನ್ನು ಸಾಧಿಸುವ ಛಲ ಒಕ್ಕಲಿಗ ಸಮುದಾಯಕ್ಕೆ ದೊರೆತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ಮಾತನಾಡಿ, ಒಕ್ಕಲಿಗ ಸಮುದಾಯ ನಾಡಿಗೆ ನೀಡಿರುವ ಕೊಡುಗೆ ಅಪಾರವಾಗಿದೆ. ಇಂದಿನ ಯುವಕರಲ್ಲಿ ಮಠ-ಮಂದಿರಗಳ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವುದರ ಜೊತೆಗೆ ಸಂಬಧಗಳ ಮೌಲ್ಯಗಳ ಬಗ್ಗೆ ತಿಳಿಸುವುದು ಅತಿ ಮುಖ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಮಾತನಾಡಿ, ರಾಜ್ಯಕ್ಕೆ ಜಿಲ್ಲಾ ಮಹಿಳಾ ಸಂಘ ಮಾದರಿಯಾಗಿ ಕೆಲಸ ಮಾಡುತ್ತಿದೆ. ಇಂದು ಸ್ವಂತ ನಿವೇಶನಹೊಂದಿ ಅನೇಕ ಸಂಘ-ಸAಸ್ಥೆಗಳಿಗೆ ಮಾದರಿಯಾಗಿದೆ. ಅವರ ಸಮಾಜಸೇವೆ ಕೆಲಸಗಳಿಗೆ ನಾವು ಹೆಚ್ಚು ಕೈಜೊಡಿಸುತ್ತೇವೆ ಎಂದು ತಿಳಿಸಿದರು.
ಮಹಿಳಾ ಸಂಘದ ಅಧ್ಯಕ್ಷೆ ರೀನಾ ಸುಜೇಂದ್ರ ಮಾತನಾಡಿ ನಮ್ಮ ಸಂಘವು ಪ್ರಾರಂಭವಾಗಿ ೨೧ ವರ್ಷಗಳು ಕಳೆದಿದೆ. ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಸಂಘ ನಮ್ಮದು ಇಂದು ಸ್ವಂತ ಭವನ ನಿರ್ಮಿಸಿz್ದÉÃವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ, ವಿಧಾನಪರಿಷತ್ ಸದಸ್ಯೆ ಆರತಿ ಕೃಷ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎ.ಪೂಣೇಶ್, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್ ಮತ್ತಿತರರಿದ್ದರು.