ಇಪಿಎಫ್ ಚಿಕ್ಕಮಗಳೂರು ಮುಖ್ಯ ಲೆಕ್ಕಾಧಿಕಾರಿ ಬನಸಗೌಡ ವೆಂಕನಗೌಡ
- ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕ ಭವಿಷ್ಯ ನಿಧಿ ಸಂಘಟನೆ
ಚಿಕ್ಕಮಗಳೂರು: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯು ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆ ಕುರಿತು ಮಾಹಿತಿ ನೀಡುವ ಕಾರ್ಯಕ್ರಮವನ್ನು ಜೂ. 19ರಂದು ಸಂಜೆ 4 ಗಂಟೆಗೆ ಎಐಟಿ ಕಾಲೇಜಿನ ಬಿಜಿಎಸ್ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಇಪಿಎಫ್ ಚಿಕ್ಕಮಗಳೂರು ಮುಖ್ಯ ಲೆಕ್ಕಾಧಿಕಾರಿ ಬನಸಗೌಡ ವೆಂಕನಗೌಡ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಪಿಎಂವಿಬಿಆರ್ ವೈ ಯೋಚನೆಯ ಪ್ರಯೋಜನಗಳು ಮತ್ತು ನೋಂದಣಿ ಪ್ರಕ್ರಿಯೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸದರು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉದ್ಯೋಗ ಸೃಷ್ಟಿಗಾಗಿ ಪಿಎಂ ವಿಬಿಆರ್ ವೈ ಯೋಜನೆಯ ಭಾಗ ಬಿ ಅಡಿಯಲ್ಲಿ ಪ್ರಯೋಜನ ಪಡೆಯುತ್ತಿರುವ ಉದ್ಯೋಗದಾತರನ್ನು ಅಭಿನಂದಿಸಲಾಗುವುದು. ಜೊತೆಗೆ ಇದೆ ವೇಳೆ ಹೊಸದಾಗಿ ಸೇರ್ಪಡೆಗೊಂಡ ಉದ್ಯೋಗಿಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಲಾಗುವುದು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಉದಯ್ ಕುಮಾರ್, ಮಹಮ್ಮದ್ ಶಫಿ ಇದ್ದರು.