ಕೊಪ್ಪ ತಾಲೂಕು ಕಮ್ಮರಡಿಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಸತೀಶ್, ಓಣಿತೋಟ ರತ್ನಾಕರ್, ಮಿತ್ರ, ಪ್ರಶಾಂತ್, ಸಂದೇಶ್, ಸುನಿಲ್, ಸಮರ್ಥ ಇತರರಿದ್ದರು. 
ಚಿಕ್ಕಮಗಳೂರು

ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಅನುದಾನ Koppa

MLA TD Rajegowda

ಕೊಪ್ಪ: ಕ್ಷೇತ್ರದಲ್ಲಿ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಹರಿಹರಪುರ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಮಗಾರಿಗಳಿಗೆ ಮಂಜೂರಾಗಿರುವ ಅನುದಾನ ಸಾಲದಿದ್ದಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.

ಕಮ್ಮರಡಿಯಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ವಸತಿಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಿಸಿಎಂ ಹಾಸ್ಟೆಲ್ ಕಟ್ಟಡವನ್ನು ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶ್, ಕೆಡಿಪಿ ಸದಸ್ಯ ರಾಜಾಶಂಕರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್, ಹರಿಹರಪುರ ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಿತ್ರ, ಮುಖಂಡರಾದ ಪ್ರಶಾಂತ್, ಸಂದೇಶ್, ಸುನಿಲ್, ಸಮರ್ಥ ಇತರರಿದ್ದರು.