ಬಾಳೆಹೊನ್ನೂರಿನ ದುರ್ಗಾದೇವಿ ನವರಾತ್ರಿ ಮಹೋತ್ಸವದಲ್ಲಿ ದುರ್ಗಾದೇವಿಗೆ ಹೂವಿನ ವಿಶೇಷ ಅಲಂಕಾರ ಮಾಡಲಾಗಿತ್ತು. 
ಚಿಕ್ಕಮಗಳೂರು

ದುರ್ಗಾದೇವಿಗೆ ಪುಷ್ಪಾಲಂಕಾರ decoration for Goddess Durga

ಬಾಳೆಹೊನ್ನೂರು: ಮಾರ್ಕಾಂಡೇಶ್ವರ ದೇವಸ್ಥಾನದಲ್ಲಿ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಆಯೋಜಿಸಿರುವ ದಸರಾ ಉತ್ಸವದಲ್ಲಿ ಭಾನುವಾರ ದುರ್ಗಾದೇವಿಗೆ ಹೂವಿನ ವಿಶೇಷ ಪೂಜೆ ನೆರವೇರಿಸಲಾಯಿತು.

ದೇವಿಯು ಮಹಾದುರ್ಗೆಯಾಗಿ ಸರ್ವಾಲಂಕಾರಭೂಷಿತಳಾಗಿ ದೇವಲೋಕದಲ್ಲಿ ದೇವತೆಗಳಿಗೆ ಅಭಯ ನೀಡಿದ ದಿನವಾಗಿರುವುದರಿಂದ ಸುಗಂಧಭರಿತ ಪುಷ್ಪಗಳಿಂದ ಅಲಂಕರಿಸಿ ಆರಾಧಿಸಲಾಯಿತು. ಬೆಳಗ್ಗೆ ದುರ್ಗೆಗೆ ವಿಶೇಷ ಅಲಂಕಾರ ಮಾಡಿ, ಅಶ್ವಾರೋಹಿಣಿ ದುರ್ಗಾ ಪೂಜಾ ಪಾರಾಯಣ ನಡೆಸಲಾಯಿತು.

ಹೂವಿನ ಪೂಜೆ ಅಂಗವಾಗಿ ದೇವಾಲಯದ ಆವರಣವನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಶಿಕ್ಷಕ ಕೆ.ಎಂ.ರಾಘವೇಂದ್ರ ಅವರು ಮಂಕುತಿಮ್ಮನ ಕಗ್ಗ ಆಧಾರಿತ ಮಾತು-ಮಂಥನ, ಕಗ್ಗದ ಬೆಳಕಿನಲ್ಲಿ ಬದುಕಿನ ದರ್ಶನ ಕುರಿತು ಉಪನ್ಯಾಸ ನೀಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಡಿ.ಎನ್.ಜೀವರಾಜ್ ಶ್ರೀ ದುರ್ಗಾದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಅ.19ರ ಬೆಳಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಶ್ವಾರೋಹಿಣಿ ದುರ್ಗಾಪೂಜಾ ಪಾರಾಯಣ ನಡೆಯಲಿದೆ. ಮಧ್ಯಾಹ್ನ 2ರಿಂದ ಭಕ್ತಿಗೀತೆ, ಭಾವ ಗೀತೆ ಹಾಗೂ ದೇಶ ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ 7.45ರವರೆಗೆ ಭಕ್ತಾದಿಗಳಿಂದ ಪೂಜಾ ಸೇವೆ, ಮಹಾ ಮಂಗಳಾರತಿ ನಡೆಯಲಿದೆ. ರಾತ್ರಿ 8ರಿಂದ ಬಾಳೆಹೊನ್ನೂರು ಜೂಮ್ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಕಲಾವಿದರಿಂದ ನೃತ್ಯ ಲೋಕ ಕಾರ್ಯಕ್ರಮ ನಡೆಯಲಿದೆ.