ಕಳಸ ಪ್ರಥಮ ದಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಿದ ರಾಜೇಂದ್ರ ಹೆಬ್ಬಾರ್ ಅವರನ್ನು ಸನ್ಮಾನಿಸಲಾಯಿತು. ಡಾ. ಭೀಮೇಶ್ವರ ಜೋಷಿ, ಎನ್.ವಿಶುಕುಮಾರ್, ಕೆ.ಎ.ಶ್ರೇಣಿಕ್, ವಿಶ್ವನಾಥ್, ಸತೀಶ್ ಕಲ್ಲಾನೆ ಇತರರಿದ್ದರು. 
ಚಿಕ್ಕಮಗಳೂರು

ವಿದ್ಯಾರ್ಥಿಗಳಿಗೆ 3,71.297 ರೂ. ಸಹಾಯಧನ ವಿತರಣೆ aid of ₹3,71,297 distributed

ಕಳಸ: ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯ ಸದುಪಯೋಗಪಡಿಸಿಕೊಂಡು ಶಿಕ್ಷಣದ ಜತೆಗೆ ಸಂಸ್ಕಾರ ಮತ್ತು ಕೌಶಲ ಬೆಳೆಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಹೊರನಾಡು ಧರ್ಮಕರ್ತ ಡಾ. ಭೀಮೇಶ್ವರ ಜೋಷಿ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ಯುವನಿಧಿ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ಇರುವುದರಿಂದ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗುತ್ತಿದೆ. ಕಾಲೇಜು ಕೂಡ ಗ್ರೇಡ್ ಮಟ್ಟದ ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ರಾಜೇಂದ್ರ ಹೆಬ್ಬಾರ್ ಮಾತನಾಡಿ, ಕಳಸ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿರುವುದು ಬಹಳ ಅನುಕೂಲವಾಗಿದೆ. ಇದಕ್ಕೆ ಕಾರಣರಾದ ಶ್ರೀ ಕ್ಷೇತ್ರ ಹೊರನಾಡು ಧರ್ಮಕರ್ತರು ಹಾಗೂ ಎಲ್ಲ ಸ್ಥಳೀಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕಾಲೇಜಿನ ಬಿಎ, ಬಿಕಾಂ ಹಾಗೂ ಬಿಸಿಎ ವಿಭಾಗಗಳ 84 ಬಡ ವಿದ್ಯಾರ್ಥಿಗಳಿಗೆ ಒಟ್ಟು 3,71.297 ರೂ. ಸಹಾಯಧನವನ್ನು ರಾಜೇಂದ್ರ ಹೆಬ್ಬಾರ್ ನೀಡಿದರು.

ಕಾಲೇಜಿನ ಅಭಿವೃದ್ಧಿಗೆ ಕೊಡುಗೆ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಈ ಹಿಂದಿನ ಪ್ರಾಂಶುಪಾಲ ವಿನಯಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ಎನ್.ವಿಶುಕುಮಾರ್, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಕೆ.ಎ.ಶ್ರೇಣಿಕ್, ವಿಶ್ವನಾಥ್, ಸತೀಶ್ ಕಲ್ಲಾನೆ, ಸುಜಯಾ ಸದಾನಂದ, ಅಜಿತ್‌ಕುಮಾರ್ ಜೈನ್, ಡಾ. ಆದಿತ್ಯ ಅಡಿಗ, ಡಾ. ಪುನೀತ್‌ಕುಮಾರ್, ಡಾ. ದಿನೇಶ್ ಇತರರಿದ್ದರು.