ಎನ್.ಆರ್.ಪುರ: ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ತಿಳಿಸಿದರು.
ನ್ಯಾಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಅಂತರ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ಮುತ್ತಿನಕೊಪ್ಪ ಗ್ರಾಪಂ ವ್ಯಾಪ್ತಿಯ ಬೈರಾಪುರದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಮಕ್ಕಳು ಶಾಲೆಗೆ ಗೈರಾಗುತ್ತಿದ್ದರು. ಇದನ್ನು ಮನಗಂಡ ಹೈಕೋರ್ಟ್ ನ್ಯಾಯಪೀಠವು ಮಕ್ಕಳ ಸುರಕ್ಷೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶಿಸಿದ ಹಿನ್ನೆಲೆಯಲ್ಲಿ ಅಂತರ್ ಇಲಾಖಾ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮಾಲೋಚನೆ ನಡೆಸಿ ಮಕ್ಕಳಿಗೆ ರಕ್ಷಣೆ ನೀಡುವುದರ ಜತೆಗೆ ಮಕ್ಕಳ ಶಿಕ್ಷಣ ಯಾವ ರೀತಿಯಲ್ಲೂ ಕುಂಠಿತವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು, ತಹಸೀಲ್ದಾರ್ ಡಾ. ನೂರುಲ್‌ಹುದಾ, ಬಿಇಒ ಶಬಾನಾ ಅಂಜುಮ್, ತಾಪಂ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ್, ಆರ್‌ಎ್ಒ ಸಂತೋಷ್, ತಾಲೂಕು ಆರೋಗ್ಯ ಅಧಿಕಾರಿ ಡಾ. ನರಸಿಂಹಮೂರ್ತಿ, ಅಂಗನವಾಡಿ ಮೇಲ್ವಿಚಾರಕಿ ಸಾವಿತ್ರಮ್ಮ, ತಾಲೂಕು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ, ಚೇತನ್‌ಕುಮಾರ್ ಇದ್ದರು.