ಬೀರೂರು ಸಮೀಪದ ಯರೇಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ಹುಲ್ಲೇಹಳ್ಳಿ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯನ್ನು ಜಿಗಣೇಹಳ್ಳಿ ನೀಲಕಂಠಪ್ಪ ಉದ್ಘಾಟಿಸಿದರು. ಪ್ರೇಮ್ ಕುಮಾರ್, ಪ್ರಸನ್ನ, ಜಯಣ್ಣ, ರಘು ಇತರರಿದ್ದರು.  
ಚಿಕ್ಕಮಗಳೂರು

ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡಿ Kadur PLD Bank

Birur: Jiganehalli Neelakanthappa, a director of the Kadur PLD Bank, stated that 'Talent Recognition' (Pratibha Puraskara) programs are being organized in government schools with the objective of identifying and encouraging student talent.

ಬೀರೂರು: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಡೂರು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಜಿಗಣೇಹಳ್ಳಿ ನೀಲಕಂಠಪ್ಪ ತಿಳಿಸಿದರು.

ಯರೇಹಳ್ಳಿಯಲ್ಲಿ ಹುಲ್ಲೇಹಳ್ಳಿ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು ಮಕ್ಕಳಲ್ಲಿ ಅಡಗಿರುವ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಜಾರಿಗೆ ತಂದರು. ಅಂದಿನಿಂದ ಇಂದಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತರಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದರೆ ಉತ್ತಮ ಸಾಧಕರಾಗಿ ಹೊರಹೊಮ್ಮಲು ಸಾಧ್ಯ. ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರು ಹಾಗೂ ಪಾಲಕರ ಸಹಕಾರ ಅಗತ್ಯ ಎಂದರು.

ಇಂಜಿನಿಯರ್ ಪ್ರೇಮ್ ಕುಮಾರ್ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಮಂಜಪ್ಪ, ಪ್ರಮುಖರಾದ ಜಯಣ್ಣ, ರಘು, ಮುಖ್ಯಶಿಕ್ಷಕ ಪ್ರಸನ್ನ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.