ಶೃಂಗೇರಿ ತಾಲೂಕಿನ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳ ಸಾಮೂಹಿಕ ನೋಂದಣಿ ಅಭಿಯಾನದಲ್ಲಿ ಪ್ರೊ. ಆಶಾಲತಾ ಮಾತನಾಡಿದರು. ಶಿವಕುಮಾರ್, ನಾಗರಾಜ್ ಇತರರಿದ್ದರು. 
ಚಿಕ್ಕಮಗಳೂರು

ಸ್ಪರ್ಧಾತ್ಮಕ ಪರೀಕ್ಷೆ ಭವಿಷ್ಯಕ್ಕೆ ಬುನಾದಿ Competitive Examination

Sringeri: Competitive examinations play a crucial role in the bright future of students. Ashalatha, Principal of the Government First Grade College in Menase, stated that ample opportunities to secure high-ranking positions in one's career exist only when examinations are faced with self-confidence.

ಶೃಂಗೇರಿ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದಾಗ ಮಾತ್ರ ಉದ್ಯೋಗದಲ್ಲಿ ಉನ್ನತ ಸ್ಥಾನ ಗಳಿಸಲು ವಿಪುಲ ಅವಕಾಶಗಳಿವೆ ಎಂದು ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಆಶಾಲತಾ ತಿಳಿಸಿದರು.

ಮೆಣಸೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿ ಸಹಾಯ ಹಸ್ತ ಯೋಜನೆಯಡಿ ವಿದ್ಯಾರ್ಥಿಗಳ ಸಾಮೂಹಿಕ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಬದುಕಿಗೆ ಪೂರಕವಾದ ಶಿಕ್ಷಣ ಪಡೆಯುವ ಗುರಿ ಇಟ್ಟುಕೊಳ್ಳಬೇಕು. ಜೀವನದ ಕಲೆ, ಕೌಶಲಗಳ ಜ್ಞಾನವನ್ನು ಸಂಪಾದಿಸಬೇಕು. ನಾವು ಪಡೆದ ಅಂಕಪಟ್ಟಿಗಳು ಪದವಿ ಪಡೆಯಲು ಮಾತ್ರ ಸಾಧ್ಯವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಸಮಗ್ರ ಕೌಶಲ ಅಭಿವೃದ್ಧಿಯನ್ನು ಉತ್ತೇಜಿಸಲು ಪೂರಕ. ಕಠಿಣವಾದ ಅಧ್ಯಯನದಿಂದ ವಿಮರ್ಶಾತ್ಮಕ ಚಿಂತನೆ, ತಾರ್ಕಿಕ ಸಾಮರ್ಥ್ಯ, ವಿಶ್ಲೇಷಣಾತ್ಮಕ ಗುಣ ಬೆಳೆಯುತ್ತದೆ ಎಂದರು.

ಐಕ್ಯೂಎಸಿ ಸಂಚಾಲಕ ಡಾ. ಶಿವಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಶೈಕ್ಷಣಿಕ ಸಂಯೋಜಕ ನಾಗರಾಜ್ ಇತರರಿದ್ದರು.