ಜಿಲ್ಲೆ

ಬಾಲಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಚಿಗುರು ಕಾರ್ಯಕ್ರಮ ಉತ್ತಮ ವೇದಿಕೆ: ವೈಶಾಲಿ ಎಂ.ಎಲ್.

Gadag - Shivanand Hiremath

ಗದಗ: ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಚಿಗುರು ಕಾರ್ಯಕ್ರಮವು  ಒಂದು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ನಗರದ ಮುಂಡರಗಿ ರಸ್ತೆಯಲ್ಲಿನ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರದಂದು ಗದಗ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಇವರುಗಳ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ -50 ದ  ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಚಿಗುರು ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಸುವರ್ಣ ಸಂಭ್ರಮದಂಗವಾಗಿ  ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಅವರು  ಪ್ರಾಸ್ತಾವಿಕವಾಗಿ ಮಾತನಾಡಿ ಚಿಗುರು ಸಾಂಸ್ಕøತಿಕ ಕಾರ್ಯಕ್ರಮ ಬಾಲ ಪ್ರತಿಭೆಗಳಿಗೆ ಸೂಕ್ತ ವೇದಿಕೆಯಾಗಿದೆ. ಇಲಾಖೆಯಿಂದ ಹಮ್ಮಿಕೊಳ್ಳಲಾಗುವ ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳ ಸದುಪಯೋಗ ಎಲ್ಲರೂ ಪಡೆಯಬೇಕೆಂದರು.  

ಕಾರ್ಯಕ್ರಮದಲ್ಲಿ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಪ್ರೊ.ಎಸ್.ವೈ. ಚಿಕ್ಕಟ್ಟಿ, ಪ್ರಾಚಾರ್ಯರಾದ ವಿನಯ ಚಿಕ್ಕಟ್ಟಿ,  ವಿವಿಧ ಸಾಂಸ್ಕøತಿಕ ಕಲಾ ತಂಡಗಳ ಕಲಾವಿದರು, ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು  ಹಾಜರಿದ್ದರು.