ಜಿಲ್ಲೆ

ನೀರಿನ ಗುಂಡಿಯಲ್ಲಿ ಬಿದ್ದು ಮಗು ಸಾವು

Haveri - Kariyappa Aralikatti

ಬ್ಯಾಡಗಿ: ನೀರಿನ ಗುಂಡಿಯಲ್ಲಿ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಣಜಿ ಗ್ರಾಮದಲ್ಲಿ ನಡೆದಿದೆ. ಪೂಜಾ ನಾಗಪ್ಪ ದುರಮುರಗೇರ (2.3) ಮೃತ ಮಗು. ಈಕೆ ಮನೆ ಹತ್ತಿರದ ಶೆಡ್​ ಬಳಿ ಆಟವಾಡುತ್ತಿದ್ದ ಸಮಯದಲ್ಲಿ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.