ಕಾರವಾರ: ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರು ಮರಳಿ ಶಾಲೆಗೆ ಹೋಗುತ್ತಿರುವುದನ್ನು ಪ್ರತಿ ದೃಢೀಕರಿಸಿ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜನೆಯಾಗಿದ್ದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲೆ ಬಿಟ್ಟ ಮಕ್ಕಳ ಪಾಲಕರ ವಿಳಾಸ ಹಾಗೂ ಇತರ ವಿವರ ಸಂಗ್ರಹಿಸಿ ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಽಕಾರಿಗಳಿಗೆ ಸೂಚಿಸಿದರು.
14 ವರ್ಷದೊಳಗಿನ ಬಾಲಕಾರ್ಮಿಕ ಹಾಗೂ 14 ರಿಂದ 18 ವರ್ಷದೊಳಗಿನ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಮಾಲೀಕರಿಗೆ 6 ತಿಂಗಳಿAದ 2 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಸಬೆಕು. ಸಾರ್ವಜನಿಕರು ಯಾವುದೇ ಮಗು ಕೆಲಸದಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098 ಹಾಗೂ 112 ಸಂಖ್ಯೆ ಕರೆ ಮಾಡಿ ಮಾಹಿತಿ ನಿಡಬೇಕು. ಕಾರ್ಮಿಕ ಇಲಾಖೆ ಮೂಲಕ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಜಿಲ್ಲೆಯಾದ್ಯಂತ ಕಾನೂನು ಅರಿವು ಕಾರ್ಯಕ್ರಮಗಳನ್ನು ವ್ಯಾಪಕ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು.
ಈ ವರ್ಷ ಇದುವರೆಗೆ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪತ್ತೆ ಕುರಿತಂತೆ 567 ತಪಾಸಣೆಗಳನ್ನು ಕೈಗೊಂಡಿದ್ದು, ಒಟ್ಟು 3 ಪ್ರಕರಣಗಳಲ್ಲಿ 2 ಬಾಲ ಕಾರ್ಮಿಕರು ಮತ್ತು 3 ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿದ್ದು ಸಂಬಂಧಪಟ್ಟ ಸಂಸ್ಥೆಗಳ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಽಕಾರಿ ಲಲಿತಾ ಸಾತೇನಹಳ್ಳಿ ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ. ಎಂ, ಡಿವೈಎಸ್‌ಪಿ ಗಿರೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ, ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಸೋನಾಲ್ ಐಗಳ್ ಇದ್ದರು.