ಮಡಿಕೇರಿ:
ಮಕ್ಕಳಿಗೆ ಮಾನವೀಯ ಹಾಗೂ ಮೌಲ್ಯಯುತ ಶಿಕ್ಷಣ ನೀಡುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಆರ್‌ಟಿಇ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಬಗ್ಗೆ ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಕುರಿತು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳ ಜೀವನದ ಪರಿಪೂರ್ಣ ಬೆಳವಣಿಗೆಗೆ ಮೌಲ್ಯಯುತ ಶಿಕ್ಷಣ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಮಕ್ಕಳ ಹಕ್ಕುಗಳ ಕುರಿತು ಸಾಕಷ್ಟು ಕಾನೂನುಗಳು, ಕಾಯ್ದೆಗಳು ಇದ್ದರೂ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆ, ದೌರ್ಜನ್ಯಗಳು ನಡೆಯುತ್ತಿದ್ದು, ಇದನ್ನು ತಡೆಯಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವಂತಾಗಬೇಕು. ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದAತೆ ನಿಗಾವಹಿಸಬೇಕು. ಹೆಣ್ಣು ಮಕ್ಕಳ ಬಾಲ್ಯ ವಿವಾಹ ತಪ್ಪಿಸಲು ಹತ್ತಿರದಲ್ಲಿಯೇ ಶಾಲಾ ಕಾಲೇಜುಗಳು ಇರಬೇಕು. ಇಲ್ಲದಿದ್ದಲ್ಲಿ ಸಾರಿಗೆ ಸಂಪರ್ಕವಾದರೂ ಸಮಪರ್ಕವಾಗಿರಬೇಕು. ಸಾರಿಗೆ ಸಂಪರ್ಕ ಇಲ್ಲದೆ ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿಯುವುದನ್ನು ಇಂದಿಗೂ ಸಹ ಕಾಣುತ್ತೇವೆ. ಕೆಲವು ಕಡೆಗಳಲ್ಲಿ ವಿದ್ಯಾರ್ಥಿ ನಿಲಯ ಸೇರಲು ಹಿಂಜರಿಕೆ ಪಡುತ್ತಾರೆ. ಆದ್ದರಿಂದ ಸಾರಿಗೆ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಬೇಕು. ಮಕ್ಕಳ ಶಿಕ್ಷಣ ಕುಂಠಿತವಾಗದAತೆ ನೋಡಿಕೊಳ್ಳುವುದು ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ, ಮಾರ್ಗದರ್ಶನ ನೀಡುವಂತಾಗಬೇಕು. ಶಿಕ್ಷಣ ಹಕ್ಕು ಕಾಯ್ದೆ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಹೇಳಿದರು.
ಡಯಟ್ ಪ್ರಾಂಶುಪಾಲ ಎಂ. ಚಂದ್ರಕಾAತ್ ಮಾತನಾಡಿ ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಶಿಶುವಿಹಾರ, ಅಂಗನವಾಡಿ, ಮಧ್ಯಾಹ್ನದ ಬಿಸಿ ಊಟ, ಹಾಲು ವಿತರಣೆ, ಬೈಸಿಕಲ್ ವಿತರಣೆ, ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ... ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಬಳಸಿಕೊಂಡು ಶಿಕ್ಷಣ ಪಡೆಯಲು ಮುಂದಾಗಬೇಕು. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿದ್ದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಚಿಕ್ಕಂದಿನಿAದಲ್ಲೇ ಸರಿಯಾದ ಮಾರ್ಗದರ್ಶನ ನೀಡಿದರೆ ಮಕ್ಕಳ ಹಕ್ಕುಗಳು ಉಲ್ಲಂಘನೆ ಆಗದಂತೆ ತಡೆಯಬಹುದಾಗಿದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ಮಾತನಾಡಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಅತೀ ಮುಖ್ಯವಾಗಿದೆ. ಶಿಕ್ಷಣದಿಂದ ಮಾತ್ರ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಮಕ್ಕಳು ಸಮಾಜದಲ್ಲಿ ಸತ್ಪçಜೆಗಳಾಗಿ ಬದುಕಬೇಕು. ಮಕ್ಕಳ ಮೇಲೆ ದೌರ್ಜನ್ಯ ನಡೆಯಬಾರದು. ಮಕ್ಕಳಿಗೆ ಶಿಕ್ಷಣ, ವಸತಿ ಸೌಲಭ್ಯಗಳಿದ್ದು, ಅದನ್ನು ಬಳಸಿಕೊಳ್ಳುವಂತಾಗಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಆರ್‌ಎಂಎಸ್‌ಎ ಸೌಮ್ಯ ಪೊನ್ನಪ್ಪ ಮಾತನಾಡಿ ಮಕ್ಕಳಲ್ಲಿ ಹೆದರಿಕೆ, ಸಂಕೋಚ ಮನೋಭಾವ ಇರುತ್ತದೆ. ಆದ್ದರಿಂದ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ಹೇಳಿದರು.
ಡಿವೈಪಿಸಿ ಎಸ್‌ಎಸ್‌ಕೆ ಎಂ. ಕೃಷ್ಣಪ್ಪ, ಸುಮತಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೊಡ್ಡೇಗೌಡ, ಭಾಗ್ಯಮ್ಮ, ರವಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಬಿಆರ್‌ಸಿ, ಸಿಆರ್‌ಪಿ ಇತರರು ಇದ್ದರು.