ಉಳ್ಳಾಲ: ಮಕ್ಕಳ ದಿನ ಸಂಭ್ರಮದ ದಿನ, ಅದರೊಂದಿಗೆ ಮಕ್ಕಳ ಹಕ್ಕು, ಬಾಧ್ಯತೆಗಳು ಹಾಗೂ ಕರ್ತವ್ಯದ ಬಗ್ಗೆ ತಿಳಿಹೇಳುವ ದಿನವೂ ಆಗಿದೆ. ಮಕ್ಕಳು ದೇಶದ ಮುಂದಿನ ಭವಿಷ್ಯ ಎಂದು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಉಷಾಲತಾ ಹೇಳಿದರು.
ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲಾ ಮಕ್ಕಳ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಶಾಲಾ ಸಂಚಾಲಕ ಕಡೆಂಜ ಸೋಮಶೇಖರ್ ಚೌಟ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿ ನಾಯಕಿ ಲಾವಣ್ಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿಯರಾದ ಮೋಹಿನಿ, ಕುಮುದಾ, ಸ್ಮಿತಾ ಉಪಸ್ಥಿತರಿದ್ದರು.
ಶಿಕ್ಷಕ ಶಿವಕುವಾರ್ ಸ್ವಾಗತಿಸಿದರು. ಕೃಷ್ಣಶಾಸಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಮ್ ಹರೇಕಳ ವಂದಿಸಿದರು.
ಸ್ಪರ್ಧಾ ವಿಜೇತರಿಗೆ ಸನ್ಮಾನ
ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದೀಕ್ಷಿತಾ, ಲಾವಣ್ಯ, ಸನಿಧ್ಯಾ, ಶಬರಿ, ಅನನ್ಯಾ, ಪ್ರಜನ್ಯಾ, ಪ್ರಣಾಮ್, ಸನತ್, ಪ್ರಜ್ವಲ್, ಸುಜನ್, ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದೀಕ್ಷಾ ಪೂಜಾರಿ, ದ್ವಿತೀಯ ಸ್ಥಾನ ಪಡೆದ ಶ್ರೀಷ್ಮಾ ಪೂಜಾರಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಫಾತಿವಾ ರಫೀದಾ, ಹಿಂದಿ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಲಾವಣ್ಯ ಅವರನ್ನು ಅಭಿನಂದಿಸಲಾಯಿತು. ಬಹುಮುಖ ಪ್ರತಿಭೆ ಡಾಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾದ ಸಲಹೆಗಾರ ಮಂಜೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.