ಜಿಲ್ಲೆ

ಮಕ್ಕಳಾಗಲಿಲ್ಲವೆಂದು ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Haveri - Kariyappa Aralikatti

ಶಿಗ್ಗಾಂವಿ: ಮಕ್ಕಳಾಗಲಿಲ್ಲವೆಂದು ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಡಸ ಗ್ರಾಮದಲ್ಲಿ ನಡೆದಿದೆ.

ಮಂಜುಳಾ ಮಂಜುನಾಥ ಕಲಗುದರಿ (26) ಮೃತ ಮಹಿಳೆ.

ಇವರು ತನಗೆ ಮಕ್ಕಳಾಗಲಿಲ್ಲವೆಂದು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.