ಹರಪನಹಳ್ಳಿಯಲ್ಲಿ ಶನಿವಾರ ಏರ್ಪಡಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ್ ಉದ್ಘಾಟಿಸಿದರು. ಪ್ರಮುಖರಾದ ಸಿ.ಪೀರ್ ಅಹ್ಮದ್, ಧನರಾಜ್, ಎಸ್.ಶೇಖರ ಗೌಡ, ರೇಣುಕಮ್ಮ, ಕೇಶವಮೂರ್ತಿ ಇತರರಿದ್ದರು. 
ಜಿಲ್ಲೆ

ಮಕ್ಕಳು ನೋಡದಿದ್ದರೆ ಕಾನೂನು ಮೊರೆ ಹೋಗಿ

ಹರಪನಹಳ್ಳಿ: ಗುರು-ಹಿರಿಯರಿಗೆ ಗೌರವಿಸುವುದನ್ನು ಮಕ್ಕಳಿಗೆ ಕಲಿಸುವ ಅವಶ್ಯಕತೆ ಇದೆ ಎಂದು ವಕೀಲರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ್ ಹೇಳಿದರು.

ಪಟ್ಟಣದ ತಾಪಂ ಅಂಗವಿಕಲರ ಭವನದಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಸದುಪಯೋಗ ಪಡೆದುಕೊಳ್ಳಬೇಕು. ವೃದ್ಧಾಪ್ಯದಲ್ಲಿ ಮಕ್ಕಳು ನೋಡದಿದ್ದರೆ ಕಾನೂನುಗಳ ಮೊರೆ ಹೋಗುವ ಮೂಲಕ ಅಗತ್ಯ ಸೌಲಭ್ಯ ಪಡೆಯಬಹುದು ಎಂದರು.

ನರೇಗಾ ಸಹಾಯಕ ನಿರ್ದೇಶಕ ವೀರಣ್ಣ ಲಕ್ಕಣ್ಣನವರ್ ಮಾತನಾಡಿ. ಹಿರಿಯರು ದೇವರಿದ್ದಂತೆ. ಮಕ್ಕಳು ಪಾಲಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ವೃದ್ಧರಿಗೆ ಅಕ್ಷರಸ್ಥರು ಕಾನೂನು ಅರಿವು ಮೂಡಿಸಬೇಕು. ಸರ್ಕಾರದಿಂದ ಸಾರಿಗೆ ಸೌಲಭ್ಯ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಸಿಗುವ ಮಾಸಾಶನವನ್ನು ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.