ಜಿಲ್ಲೆ

ಮಕ್ಕಳಾಗಲಿಲ್ಲವೆಂದು ಮನನೊಂದು ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಮಕ್ಕಳಾಗಲಿಲ್ಲವೆಂದು ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಗೋವಿಂದ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ತಾವರೆಪ್ಪ ಶಂಕ್ರನಾಯ್ಕ ಲಮಾಣಿ (38) ಮೃತ ವ್ಯಕ್ತಿ.

ಈತ ತಮಗೆ ಮಕ್ಕಳಾಗಲಿಲ್ಲವೆಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.