ಸುಳ್ಯ: ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆ ಗುರುವಾರ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ಮಾತನಾಡಿ, ನೆಹರು ಭಾರತದ ಮೊದಲ ಪ್ರಧಾನಿಯಾಗಿ ಆಧುನಿಕ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನೆಹರು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಭವ್ಯ ಭಾರತಕ್ಕೆ ಮುನ್ನುಡಿ ಬರೆದವರು ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್ ಮಾತನಾಡಿ, ನೆಹರು ದೂರದೃಷ್ಟಿಯ ಆಡಳಿತದಿಂದ ಇಂದು ನಾವು ತಂತ್ರಜ್ಞಾನ, ವಿಜ್ಞಾನದಲ್ಲಿ ಮಹತ್ತರ ಅಭಿವೃದ್ಧಿ ಕಂಡಿದ್ದೇವೆ. ಸಮಸ್ತ ನೆಹರು ಕುಟುಂಬವೇ ದೇಶಕ್ಕಾಗಿ ಮುಡಿಪಾಗಿದೆ ಎಂದು ಹೇಳಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಪರಶುರಾಮ ಚಿಲ್ತಡ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರು, ಬ್ಲಾಕ್ ಉಪಾಧ್ಯಕ್ಷ ಗೋಕುಲ್ ದಾಸ್, ಜಿಲ್ಲಾ ಕೆಡಿಪಿ ಸದಸ್ಯೆ ಸುಜಯ ಕೃಷ್ಣ ಕೆಪಿಸಿಸಿ ಕಾರ್ಮಿಕ ಘಟಕ ಕಾರ್ಯದರ್ಶಿ ಸುರೇಶ್ ಕಂದಡ್ಕ, ನಗರಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ರಾಜು ಪಂಡಿತ್, ಅನಿಲ್ ರೈ ಪುಡ್ಕಜೆ, ಚಂದ್ರಶೇಖರ ನಾಯ್ಕ ಕಂದಡ್ಕ, ಧರ್ಮಪಾಲ ಕೊಯಿಂಗಾಜೆ ಮಹೇಶ್ ಬೆಳ್ಳಾರ್ಕರ್, ಕೇಶವ ಮೊರಂಗಲ್ಲು, ಚಂದ್ರನ್ ಕೂಟೇಲು, ಜುಬೆರ್ ಅರಂತೋಡು, ಯಶೋಧರ ಬಿ.ಸಿ., ಮಂಜುನಾಥ ಮಡ್ತಿಲ, ಗಂಗಾಧರ್ ಮೇನಾಲ ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿದರು, ಯುವ ಕಾಂಗ್ರೆಸ್ ಮುಖಂಡ ಚೇತನ್ ಕಜೆಗದ್ದೆ ವಂದಿಸಿದರು.