ಜಿಲ್ಲೆ

ಮಕ್ಕಳ ದಿನಾಚರಣೆ ಅಂಗವಾಗಿ ನಗರದಲ್ಲಿ ಸೈಕಲ್ ಜಾಥಾ: ಡಿಎಚ್‌ಒ ಡಾ.ಟಿ.ಎನ್.ಧನಂಜಯ ಚಾಲನೆ

reportermys

ಮಂಡ್ಯ: ಮಕ್ಕಳ ದಿನಾಚರಣೆ ಹಾಗೂ ವಿಶ್ವ ಮಧುಮೇಹ ದಿನದ ಅಂಗವಾಗಿ ಸೋಮವಾರ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಕುಟುಂಬ ಇಲಾಖೆ, ಮಕ್ಕಳ ಸಹಾಯವಾಣಿ 1098 ಸಹಯೋಗದಲ್ಲಿ ಆಯೋಜಿಸಿದ್ದ ಜಾಥಾಗೆ ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಚಾಲನೆ ನೀಡಿದರು.

ವಿಶ್ವ ಮಧುಮೇಹ ದಿನಾಚರಣೆ ಮತ್ತು ಮಕ್ಕಳ ದಿನಾಚರಣೆಯ ಅಂಗವಾಗಿ ಸೈಕಲ್ ಜಾಥಾ ಆಯೋಜಿಸಲಾಗಿದೆ. ವೇಗವಾಗಿ ಹರಡುತ್ತಿರುವ ಅಸಾಂಕ್ರಾಮಿಕ ಕಾಯಿಲೆ ಮಧುಮೇಹ. ಇದಕ್ಕೆ ಮುಖ್ಯ ಕಾರಣ ನಾವು ಸೇವಿಸುವ ಆಹಾರ ಪದ್ಧತಿ ಮತ್ತು ವ್ಯಾಯಾಮ ಇಲ್ಲದ ಜೀವನ ಶೈಲಿ. ಪ್ರತಿ ಮನೆಯಲ್ಲೂ ಮಧುಮೇಹಕ್ಕೆ ತುತ್ತಾದ ಒಬ್ಬ ವ್ಯಕ್ತಿಯನ್ನು ಕಾಣಬಹುದಾಗಿದೆ ಎಂದರು.

ಡಿಡಿಪಿಐ ಎಸ್.ಟಿ.ಜವರೇಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಬಿಇಒ ಚಂದ್ರಕಾಂತಾ, ಶಿಕ್ಷಣಾಧಿಕಾರಿ ಮಹೇಶ್, ಶಿಕ್ಷಣಾಧಿಕಾರಿ ಕುಮಾರಸ್ವಾಮಿ, ವಿಷಯ ಪರಿವೀಕ್ಷಕರಾದ ಎಸ್.ಲೋಕೇಶ್, ಸಿ.ಎಲ್.ನಂಜರಾಜು, ನಾಗೇಂದ್ರಮೂರ್ತಿ, ನಾಗರಾಜ್, ಮಕ್ಕಳ ಸಹಾಯವಾಣಿ ನಿರ್ದೇಶಕ ಮಹೇಶ್ ಚಂದ್ರಗುರು, ಶಿವಸ್ವಾಮಿ, ತಿಮ್ಮರಾಜು, ಕೇಶವ, ಶುಭಾವತಿ, ಸುಜಾತಾ, ರಶ್ಮಿ, ಸಿಂಚನಾ, ಲಕ್ಷ್ಮೀಶ, ಮಹಾದೇವ, ಸ್ಮಿತಾ ಹಾಜರಿದ್ದರು.

ಡಿಡಿಪಿಐ ಕಚೇರಿಯಿಂದ ಹೊರಟ ಜಾಥಾ, ಆರ್‌ಪಿ ರಸ್ತೆ ಮೂಲಕ ಸಾಗಿ ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ಜಿಲ್ಲಾಸ್ಪತ್ರೆ ರಸ್ತೆ ಮಾರ್ಗವಾಗಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಮುಕ್ತಾಯವಾಯಿತು. ವಿದ್ಯಾರ್ಥಿಗಳು ಸೇರಿದಂತೆ 150ಕ್ಕೂ ಹೆಚ್ಚು ಜನರು ಜಾಥಾದಲ್ಲಿ ಪಾಲ್ಗೊಂಡಿದ್ದರು.