ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಮಕ್ಕಳ ಸಂತೆ ಬಿಜಿನೆಸ್ ಡೇ ಕಾರ್ಯಕ್ರಮವನ್ನು ಎಂ.ನಾಗೇಂದ್ರ ಪೈ ಉದ್ಘಾಟಿಸಿದರು.  
ಜಿಲ್ಲೆ

ಮಕ್ಕಳ ಸಂತೆ, ವಿಜ್ಞಾನ ಮಾದರಿ ಪ್ರದರ್ಶನ

ಇಂದಿರಾ ಎನ್ ಕೆ

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಮಕ್ಕಳ ಸಂತೆ ಬಿಜಿನೆಸ್ ಡೇ ಕಾರ್ಯಕ್ರಮ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆಶ್ರಯದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆ ಗಂಗೊಳ್ಳಿಯ ಎಸ್‌ವಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ನಡೆಯಿತು.

ಉದ್ಯಮಿ ವಿನೋದ್ ಪೈ ಮಕ್ಕಳ ಸಂತೆ ಮತ್ತು ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ಪ್ರದೀಪ್ ಕುಮಾರ್ ಶೆಟ್ಟಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆ ಉದ್ಘಾಟಿಸಿದರು.

ಗಂಗೊಳ್ಳಿಯ ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಾದ ಗೋಪಾಲ ದೇವಾಡಿಗ, ರಾಘವೇಂದ್ರ ಶೇರುಗಾರ್, ಭಗಿನಿ ಕ್ರೆಸೆನ್ಸ್, ಸಭಾ ಭಾನು ಮತ್ತು ಸುಮಯ್ಯ ಮಕ್ಕಳ ಸಂತೆಯ ವಿವಿಧ ಮಳಿಗೆಗಳನ್ನು ಉದ್ಘಾಟಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು.

ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ್ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಸಂಚಾಲಕ ಎನ್.ಸದಾಶಿವ ನಾಯಕ್, ಸದಸ್ಯರಾದ ಕೆ.ರಾಮನಾಥ ನಾಯಕ್, ಎಂ.ನಾಗೇಂದ್ರ ಪೈ, ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ-ರಕ್ಷಕ ಸಂಘ ಉಪಾಧ್ಯಕ್ಷ ಜಿ.ವಿಠಲ ಶೆಣೈ, ಪತ್ರಕರ್ತ ಬಿ.ರಾಘವೇಂದ್ರ ಪೈ, ಉಪನ್ಯಾಸಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗೋಪಾಲ ದೇವಾಡಿಗ, ರಾಘವೇಂದ್ರ ಶೇರುಗಾರ್, ಕ್ರೆಸೆನ್ಸ್, ಸಭಾ ಭಾನು ಮತ್ತು ಸುಮಯ್ಯ ಹಾಗೂ ಎಂ.ವಿನೋದ ಪೈ ಅವರನ್ನು ಗೌರವಿಸಲಾಯಿತು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಸ್ವಾಗತಿಸಿದರು. ಉಪನ್ಯಾಸಕಿ ಸುಗುಣಾ ಆರ್.ಕೆ. ವಂದಿಸಿದರು.