ವಿಜಯವಾಣಿ ಸುದ್ದಿಜಾಲ ಉಡುಪಿ
ಕೋಟದ ಸಾಲಿಗ್ರಾಮ ಮಕ್ಕಳ ಮೇಳವು 50ರ ಸಂಭ್ರಮದಲ್ಲಿದ್ದು, ಸುವರ್ಣ ಪರ್ವ-8ರ ನಿಮಿತ್ತ ಉಡುಪಿಯ ಯಕ್ಷಗಾನ ಕಲಾರಂಗದ ಆಶ್ರಯದಲ್ಲಿ ಮಾ.16ರಂದು ಮಕ್ಕಳ ಯಕ್ಷಗಾನ ರಂಗಭೂಮಿ ಕುರಿತು ವಿಚಾರಗೋಷ್ಠಿ ಹಾಗೂ ಮಕ್ಕಳ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ.
ಯಕ್ಷಗಾನ ವಿದ್ವಾಂಸ ಎಂ. ಪ್ರಭಾಕರ್ ಜೋಷಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಲ. ಸುರೇಶ್ ಪ್ರಭು, ಭುವನ ಪ್ರಸಾದ ಹೆಗ್ಡೆ, ಲ. ವಿ.ಜಿ. ಶೆಟ್ಟಿ, ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಅಧ್ಯಕ್ಷ ಬಲರಾಮ್ ಕಲ್ಕೂರ, ಕಾರ್ಯಾಧ್ಯಕ್ಷ ಮಹೇಶ್ ಉಡುಪ ಕೆ., ಉಪಾಧ್ಯಕ್ಷ ಜನಾರ್ದನ್ ಹಂದೆ ಪಾಲ್ಗೊಳ್ಳಲಿದ್ದಾರೆ. ಸಾಧಕ ಬಿ.ಕೇಶವ್ ಬಡಾನಿಡಿಯೂರು ಅವರ ಸನ್ಮಾನ ನಡೆಯಲಿದೆ.
ಬೆಳಗ್ಗೆ 11ಕ್ಕೆ ಯಕ್ಷಗಾನ ಪ್ರಾಚಾರ್ಯ ಗುಂಡ್ಮಿ ಸದಾನಂದ್ ಐತಾಳ ಅಧ್ಯಕ್ಷತೆಯಲ್ಲಿ ವಿಚಾರ ಗೋಷ್ಠಿ ನಡೆಯಲಿದೆ. ಯಕ್ಷ ಸಾಹಿತಿ ಪ್ರೊ.ಶ್ರೀಧರ್ ಡಿ.ಎಸ್., ಯಕ್ಷ ಗುರು ಪ್ರಸಾದಕುಮಾರ್ ಮೊಗೆಬೆಟ್ಟು, ಬ್ರಹ್ಮಾವರದ ರಂಗಕರ್ಮಿ ಅಭಿಲಾಷ ಎಸ್., ಯಕ್ಷ ಗುರು ದೇವದಾಸ ರಾವ್ ಕೂಡ್ಲಿ, ಪತ್ರಕರ್ತೆ ರಾಜಲಕ್ಷ್ಮೀ ಕೋಡಿಬೆಟ್ಟು ಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ.