ಜಿಲ್ಲೆ

ಚಿಕ್ಕಮಗಳೂರು ಜಿಲ್ಲೆ ಅಂಗನವಾಡಿಗಳಲ್ಲಿ ನೇಮಕಾತಿಗೆ ಅರ್ಹತೆಗಳೇನು?

sspmiracle1982

ಚಿಕ್ಕಮಗಳೂರು: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ವಿವಿಧ ಗ್ರಾಮಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್​ಎಸ್​ಎಲ್​​ಸಿ ಪಾಸಾಗಿರಬೇಕು. ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು. 18 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ಅಗತ್ಯ ದಾಖಲಾತಿಗಳು ಹಾಗೂ ಪ್ರಮಾಣಪತ್ರಗಳೊಂದಿಗೆ ಆನ್​ಲೈನ್ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in