Oplus_131072 
ಜಿಲ್ಲೆ

ಟಿಎಪಿಸಿಎಂಎಸ್ ನಿರ್ದೇಶಕರಾಗಿ ಚಿರಂಜೀವಿ ಆಯ್ಕೆ

 ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಖಾಲಿ ಇದ್ದ ನಿರ್ದೇಶಕ ಸ್ಥಾನಕ್ಕೆ ಸಂತೇಶಿವರ ಗ್ರಾಮದ ಚಿರಂಜೀವಿ ಅವರನ್ನು ಎಲ್ಲ ನಿರ್ದೇಶಕರು ಸರ್ವಾನುಮತದಿಂದ ಆಯ್ಕೆ ಮಾಡಿದರು.

ಎ.ಎಸ್.ಕೃಷ್ಣೇಗೌಡ ರಾಜೀನಾಮೆಯಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಎಲ್ಲರೂ ಒಮ್ಮತದಿಂದ ಚಿರಂಜೀವಿ ಅವರನ್ನು ಆಯ್ಕೆ ಮಾಡಿದರು. ನೂತನ ನಿರ್ದೇಶಕನನ್ನು ಶಾಸಕ ಸಿ.ಎನ್.ಬಾಲಕೃಷ್ಣ, ರಾಜ್ಯ ಮಾರಾಟ ಮಹಾಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮೀಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಆರ್.ಅನಿಲ್‌ಕುಮಾರ್ ಅಭಿನಂದಿಸಿದರು. ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಒಂದು ಕಾಲದಲ್ಲಿ ಜಪ್ತಿ ಮಾಡುವ ಹಂತದಲ್ಲಿದ್ದ ಟಿಎಪಿಸಿಎಂಎಸ್ ಇದೀಗ 2.5 ಕೋಟಿ ರೂ. ನಿವ್ವಳ ಆಸ್ತಿ ಹೊಂದಿದೆ. ಇದಕ್ಕಾಗಿ ಹಿಂದಿನ ಎಲ್ಲ ಅಧ್ಯಕ್ಷರು ಕಾರಣರಾಗಿದ್ದಾರೆ. ಸಹೋದರ ಸಿ.ಎನ್.ಪುಟ್ಟಸ್ವಾಮೀಗೌಡರು ರಾಜ್ಯ ಮಾರಾಟ ಮಹಾ ಮಂಡಳದ ನಿರ್ದೇಶಕರಾದ ಮೇಲೆ ತಾಲೂಕಿಗೆ 1 ಕೋಟಿ ರೂ. ಅನುದಾನವನ್ನು ಮಾರಾಟ ಮಂಡಳದಿಂದ ಕೊಡಿಸಿದ್ದು, ಕಟ್ಟಡ ನಿರ್ಮಾಣಕ್ಕಾಗಿ 35 ಲಕ್ಷ ರೂ.ಅನುದಾನ ಒದಗಿಸಿದ್ದಾರೆ ಎಂದರು.

ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ನವಿಲೆ ಪರಮೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಅನಿಲ್ ಕುಮಾರ್, ನಿರ್ದೇಶಕರಾದ ವಿ.ಎನ್.ರಾಜಣ್ಣ, ಬಿ.ಎಚ್.ಶಿವಣ್ಣ, ಕೆ.ಎಂ.ನಂಜಪ್ಪ, ಎನ್.ಕೃಷ್ಣೇಗೌಡ, ರಮೇಶ್ ಕುಂಬಾರಹಳ್ಳಿ, ಸಿ.ಜಿ.ಜಗದೀಶ್, ಬಿ.ಕೆ.ಮನು, ಬಿ.ವಿ.ಮುನಿಸ್ವಾಮಿ, ಯೋಗೇಶ್, ಚಂದ್ರಕಲಾ ಮಂಜೇಗೌಡ, ಯು.ವಿ.ಮಂಜುಳಾ, ಟಿಎಪಿಸಿಎಂಎಸ್ ಕಾರ್ಯದರ್ಶಿ ಸಂಧ್ಯಾ, ಸಿಬ್ಬಂದಿ ಜಯಪಾಲ್, ಬಿ.ಪಿ.ಸತೀಶ್, ಎಸ್.ಎನ್.ಹರೀಶ್, ಜಯಸೂರ್ಯ, ತ್ರಿವೇಣಿ ಇತರರಿದ್ದರು.