ಜಿಲ್ಲೆ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಸರಿ

Chitradurga

ಚಿತ್ರದುರ್ಗ: ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಐತಿಹಾಸಿಕ ತೀರ್ಮಾನವಾಗಿದ್ದು, ಇದರಿಂದ ಭಾರತದ ಯಾವೊಬ್ಬ ನಾಗರಿಕರಿಗೂ ತೊಂದರೆ ಆಗುವುದಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬಿಜೆಪಿ ಜಿಲ್ಲಾ ಘಟಕ ನಗರದ ಕೆಳಗೋಟೆ ಪ್ರದೇಶದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಿಎಎ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ದೇಶದ ಅಭಿವೃದ್ಧಿಗಾಗಿ ಪೌರ ತಿದ್ದುಪಡಿ ಕಾಯ್ದೆ ಸೇರಿ ಹತ್ತಾರು ಉತ್ತಮ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ಆದರೆ, ಪ್ರತಿಪಕ್ಷಗಳು ಸಿಎಎ ಕುರಿತು ಸಲ್ಲದ ಆರೋಪ ಮಾಡುತ್ತಿದ್ದು, ದೇಶದ ನಾಗರಿಕರು ಪ್ರತಿಪಕ್ಷ ನಾಯಕರ ಪಿತೂರಿ ವಿರುದ್ಧ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಳಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ಯಾಮಲಾ ಶಿವಪ್ರಕಾಶ್, ಗ್ರಾಮಾಂತರ ಅಧ್ಯಕ್ಷ ನಂದಿ ನಾಗರಾಜ್ ಮಾರಘಟ್ಟ, ನಗರ ಘಟಕದ ಅಧ್ಯಕ್ಷ ಶಶಿಧರ್, ಮಾಜಿ ಅಧ್ಯಕ್ಷ ಕೆ.ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ಅನುರಾಧಾ ರವಿಕುಮಾರ್, ಅಂಗಡಿ ಮಂಜಣ್ಣ, ಸ್ಲಂ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಸ್ಲಾಂ ಪಾಷ, ಮಹಂತೇಶ್, ಬಸಮ್ಮ ಇತರರು ಭಾಗವಹಿಸಿದ್ದರು.