ಜಿಲ್ಲೆ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Chitradurga

ಚಿತ್ರದುರ್ಗ: ಕನ್ನಡ ಪುಸ್ತಕ ಪ್ರಾಧಿಕಾರ 2019ನೇ ಸಾಲಿನಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶ ಲೇಖನ, ಪ್ರಬಂಧ ಸೇರಿ ಇತರೆ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಪ್ರೊತ್ಸಾಹ ಧನ ವಿತರಿಸಲು ಅರ್ಜಿ ಆಹ್ವಾನಿಸಲಾಗಿತ್ತು. ಕೋವಿಡ್-19 ಪರಿಸ್ಥಿತಿ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 30ರ ವರೆಗೆ ವಿಸ್ತರಿಸಲಾಗಿದೆ.

ಸೊಗಸು ಯೋಜನೆ: 2019ರ ಜನವರಿಯಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.

ಆದರೆ, ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪುಸ್ತಕ ಕಳುಹಿಸುವ ದಿನಾಂಕವನ್ನು ಮೇ 30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22484516 ಅಥವಾ 22017704 ಕ್ಕೆ ಸಂಪರ್ಕಿಸ ಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.