ಚಿತ್ರದುರ್ಗ: ಜಿಲ್ಲೆಯಲ್ಲಿ ಡೆಂೆ, ಚಿಕೂನ್ ಗುನ್ಯಾ ಸೇರಿ ಸಾಂಕ್ರಾಂಇಕ ರೋಗಗಳು ಉಲ್ಬಣಗೊಂಡಿದ್ದು, ಇದಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವಿನೋತ್‌ಪ್ರಿಯಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯಇಲಾಖೆ, ನಗರಸಭೆ, ಪುರಸಭೆ, ಪಪಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈ ವರ್ಷ ಜಿಲ್ಲೆಯಲ್ಲಿ ಡೆಂೆ ಮತ್ತು ಚಿಕೂನ್ ಗುನ್ಯಾ ರೋಗಗಳ ಸಂಖ್ಯೆ ಹೆಚ್ಚಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ಕೀಟಜನ್ಯ ರೋಗ ನಿಯಂತ್ರಣಾಧಿಕಾರಿ ಡಾ.ಜಯಮ್ಮ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿರುವ ಸೊಳ್ಳೆ ಹಾವಳಿ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ನಿರ್ಲಕ್ಷ್ಯ ವಹಿಸಿವೆ. ಫಾಗಿಂಗ್‌ಗೆ ಕೋರಿದ್ದರೂ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಈ ವರ್ಷ 7723 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ, ಚಿತ್ರದುರ್ಗ-1761, ಚಳ್ಳಕೆರೆ-2188, ಹೊಸದುರ್ಗ-1448, ಹೊಳಲ್ಕೆರೆ-1450, ಮೊಳಕಾಲ್ಮೂರು-766 ವರದಿಯಾಗಿವೆ. ಕಳೆದ ವರ್ಷ 5492 ನಾಯಿ ಹಾಗೂ ಈ ವರ್ಷ 529 ಜನರಿಗೆ ಹಾವು ಕಚ್ಚಿರುವ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಎಚ್1ಎನ್1 ಗೆ 7 ಜನ ಸಾವು: ಈ ವರ್ಷ ಕರಳುಬೇನೆ 22,386, ಟೈಫಾಯ್ಡ-3,149 ಹಾಗೂ ಎಚ್1ಎನ್1-51 ಪ್ರಕರಣಗಳಾಗಿದ್ದು, ಎಚ್ 1ಎನ್1ನಿಂದ 7 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ರೇಣುಪ್ರಸಾದ್ ತಿಳಿಸಿದರು.