ಜಿಲ್ಲೆ

ಜಿಲ್ಲಾದ್ಯಂತ 144 ನಿಷೇಧಾಜ್ಞೆ ಜಾರಿ

Chitradurga

ಚಿತ್ರದುರ್ಗ: ಕರೊನಾ ಸೋಂಕು ಹರಡುವ ಭೀತಿಯಿಂದ 144ನೇ ಕಲಂ ಅನ್ವಯ ಮಾ.17ರಿಂದ ಮಾ. 22ರ ವರೆಗೆ ಆರು ದಿನಗಳ ಕಾಲ ಜಿಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶ ಹೊರಡಿಸಿದ್ದಾರೆ.

ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಿಗೆ ಕಡಿವಾಣ ಬೀಳಲಿದೆ. 5ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರುವಂತಿಲ್ಲ. ಈ ಆದೇಶ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.