ಜಿಲ್ಲೆ

ಕ್ವಾರಂಟೈನ್ ಪಾಲಿಸದವರ ವಿರುದ್ಧ ಕ್ರಮ

ಚಿತ್ರದುರ್ಗ: ಕರೊನಾ ಹತೋಟಿ ನಿಟ್ಟಿನಲ್ಲಿ ಕ್ವಾರಂಟೈನ್ ನಿಯಮಗಳನ್ನು ಪಾಲಿಸದವರ ವಿರುದ್ಧ ಕೋವಿಡ್-19ರ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ 1897ಅಡಿಯಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ಆರ್.ವಿನೋತ್‌ಪ್ರಿಯಾ ಎಚ್ಚರಿಸಿದ್ದಾರೆ.

ಸೋಂಕು ಸಮುದಾಯದಲ್ಲಿ ಹರಡುವುದನ್ನು ತಡೆಯಲು ಶಂಕಿತರು ಹಾಗೂ ಸೋಂಕು ಪೀಡಿತ ರಾಜ್ಯಗಳಿಂದ ಜಿಲ್ಲೆಗೆ ಮರಳಿ ಬಂದಿರುವಂಥವರಿಗೆ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್‌ಗೆ ಸೂಚಿಸಲಾಗಿದೆ.

ಆದರೆ, ಕೆಲವರು ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರುವುದು ಹಾಗೂ ದೂರವಾಣಿಗೆ ಕರೆ ಮಾಡಿ ವಿಚಾರಿಸಿದಾಗ ನಿಯಮ ಮೀರಿ ಬೇರೆಡೆ ಹೋಗಿರುವುದು ಕಂಡು ಬಂದಿದ್ದು, ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ತಿಳಿಸಿದ್ದಾರೆ.