ಜಿಲ್ಲೆ

ಕಾನ್‌ಸ್ಟೇಬಲ್‌ಗೆ ಕರೊನಾ ಸೋಂಕು

ಚಿತ್ರದುರ್ಗ: ಈ ತಾಲೂಕಿನ ಗ್ರಾಮವೊಂದರ ನಿವಾಸಿ, 27 ವರ್ಷ ವಯಸ್ಸಿನ ಕೆಎಸ್‌ಆರ್‌ಪಿ ಕಾನ್‌ಸ್ಟೇಬಲ್‌ಗೆ ಕೋವಿಡ್ ಸೋಂಕು ತಗಲಿರುವುದು ಶನಿವಾರ ದೃಢವಾಗಿದೆ ಎಂದು ಡಿಸಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಹಾಸನದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ಕಾನ್‌ಸ್ಟೇಬಲ್, ಬೆಂಗಳೂರಿನ ಸೋಂಕು ಪೀಡಿತ ಪ್ರದೇಶ ಅತ್ತಿಬೆಲೆ ಚೆಕ್‌ಪೋಸ್ಟ್‌ನಲ್ಲಿ ಮೇ 7ರಿಂದ 17ರ ವರೆಗೆ ಕರ್ತವ್ಯ ನಿರ್ವಹಿಸಿದ್ದಾರೆ.

ಚಿತ್ರದುರ್ಗ ತಾಲೂಕಿನ ಸೊಂಡೇಕೊಳದಲ್ಲಿ ಹೋಂ ಕ್ವಾರಂಟೈನ್‌ನಲ್ಲಿದ್ದು, ಆರೋಗ್ಯ ಇಲಾಖೆ ಇವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿತ್ತು. ಈತನ ಪತ್ನಿ ಹಾಗೂ ಮಗುವನ್ನು ಪ್ರಾಥಮಿಕ ಸಂಪರ್ಕಿತರೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಕಾನ್‌ಸ್ಟೇಬಲ್ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಚಿತ್ರದುರ್ಗದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39ಕ್ಕೆ ಏರಿದ್ದು, 9 ಜನರು ಚೇತರಿಸಿಕೊಂಡಿದ್ದಾರೆ.