ಜಿಲ್ಲೆ

ಚಿತ್ರದುರ್ಗ ಜಿಲ್ಲೆಗೆ ಅನ್ಯಾಯ

Chitradurga

ಚಿತ್ರದುರ್ಗ: ಬಜೆಟ್‌ನಿಂದ ಬರದ ನಾಡು ಚಿತ್ರದುರ್ಗಕ್ಕೆ ಅನ್ಯಾಯವಾಗಿದೆ ಎಂದು ಜೆಡಿಎಸ್ ಯುವ ಮುಖಂಡ ಓ.ಪ್ರತಾಪ್ ಜೋಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಡಬೇಕಿತ್ತು. ಆದರೆ, ಬಜೆಟ್‌ನಲ್ಲಿ ಜಿಲ್ಲೆಯ ಬಗ್ಗೆ ಸಿಎಂ ಯಾವುದೇ ಕಾಳಜಿ ತೋರಿಸಿಲ್ಲ ಎಂದು ಟೀಕಿಸಿದ್ದಾರೆ.