ಜಿಲ್ಲೆ

ನಡ್ಡಾ ಜತೆಗೆ ವಿಡಿಯೋ ಕಾನ್ಫರೆನ್ಸ್

ಚಿತ್ರದುರ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರ ನೆರವಿಗೆ ಬಿಜೆಪಿಯಿಂದ ಸ್ಥಳೀಯವಾಗಿ ಕೈಗೊಂಡ ಕಾರ್ಯಗಳ ಕುರಿತು ವಿಡಿಯೋಕಾನ್ಫರೆನ್ಸ್ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಗುರುವಾರ ಪಕ್ಷದ ಮುಖಂಡರು ಮಾಹಿತಿ ನೀಡಿದರು.

ನಡ್ಡಾ ಅವರು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರು, ಕಾರ್ಯದರ್ಶಿ, ಜಿಲ್ಲೆಗಳ ಪಕ್ಷದ ಪ್ರಮುಖರ ಜತೆ ಸಮಾಲೋಚನೆ ನಡೆಸಿದರು.

ಜಿಲ್ಲೆಯ ಪ್ರಸ್ತುತ ಚಿತ್ರಣ ಕುರಿತು ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಜಿಲ್ಲಾಧ್ಯಕ್ಷ ಎ.ಮುರುಳಿ ನಡ್ಡಾ ಅವರಿಗೆ ಮಾಹಿತಿ ನೀಡಿದರು. ಜಿಲ್ಲಾಡಳಿತ ಕೈಗೊಂಡ ಕ್ರಮಗಳನ್ನೂ ವಿವರಿಸಿದರು.

ಜಿಲ್ಲಾ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹನುಮಂತ ಗೌಡ, ವಕ್ತಾರ ದಗ್ಗೆ ಶಿವಪ್ರಕಾಶ್, ನಗರಸಮಿತಿ ಅಧ್ಯಕ್ಷ ಶಶಿಧರ್, ಗ್ರಾಮಾಂತರ ಮಂಡಲದ ಅಧ್ಯಕ್ಷ ನಂದಿ ನಾಗರಾಜ್, ಪ್ರಮುಖರಾದ ಸಂಪತ್ ಕುಮಾರ್, ಶಂಭು ಹಾಗೂ ಕಿರಣ್ ಇದ್ದರು.