ಚಿತ್ರದುರ್ಗ: ಜೂ.25 ರಿಂದ ಜುಲೈ 3 ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಜಿಲ್ಲಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.
ಚಿತ್ರದುರ್ಗ ತಾಲೂಕಿನ 25, ಚಳ್ಳಕೆರೆ-18, ಹಿರಿಯೂರು-14, ಹೊಳಲ್ಕೆರೆ-11, ಹೊಸದುರ್ಗ-12 ಹಾಗೂ ಮೊಳಕಾಲ್ಮೂರು ತಾಲೂಕಿನ 7 ಪರೀಕ್ಷಾ ಕೇಂದ್ರಗಳ ಸಹಿತ ಜಿಲ್ಲೆಯ 87 ಕೇಂದ್ರಗಳ ಆಸುಪಾಸು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.