ಚಿತ್ರದುರ್ಗ: ಹೊಸದುರ್ಗದಲ್ಲಿ ಮಂಗಳವಾರ ಬೆಳಗ್ಗೆ 10ರ ಸಮಯದಲ್ಲಿ ದುಷ್ಕರ್ಮಿಗಳಿಬ್ಬರು ಮಹಿಳೆಯೊಬ್ಬರಿಂದ 2.40 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಕಸಿದು ಪರಾರಿಯಾಗಿದ್ದಾರೆ.
ಪಟ್ಟಣದ ಅಯ್ಯಪ್ಪ ಸ್ವಾಮಿ ಬಡಾವಣೆ ನಿವಾಸಿ ಮೀನಾಕ್ಷಮ್ಮ ಎಂಬುವವರು ಮನೆಯಿಂದ ಅಂಗಡಿಗೆಂದು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದು ಅಂದಾಜು 20 ವರ್ಷದ ದುಷ್ಕರ್ಮಿಗಳು,60 ಗ್ರಾಂ ತೂಕದ ಬಂಗಾರದ ಮಾಂಗಲ್ಯಸರ ಮತ್ತು ಅಂದಾಜು 15 ಗ್ರಾಂ.ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದಾರೆ. ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.