ಚಿತ್ರದುರ್ಗ: ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡಿರುವ 12 ಮಂದಿಯನ್ನು ಬುಧವಾರ ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಿಂದ ಬಿಡುಗಡೆ ಮಾಡಲಾಯಿತು.
ಸೋಂಕು ದೃಢಪಟ್ಟಿದ್ದ ಈ 12 ಜನರ ಚೇತರಿಕೆಯಿಂದಾಗಿ ಚಿತ್ರದುರ್ಗ ಜಿಲ್ಲೆ ಸೋಂಕು ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆ ಬಾಕಿ ಇದೆ. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಹೊರತುಪಡಿಸಿದರೆ ಜಿಲ್ಲೆಯಲ್ಲಿ ಸೋಂಕು ಪತ್ತೆಯಾಗಿದ್ದ ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಇಲಾಖೆ ಆರೋಗ್ಯ ಅಧಿಕಾರಿ ಡಾ.ಪಾಲಾಕ್ಷ ತಿಳಿಸಿದ್ದಾರೆ.