ಚಿತ್ರದುರ್ಗ: ಕೋವಿಡ್-19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಂಜಾರ ಸಮುದಾಯಕ್ಕೂ ವಿಶೇಷ ಪ್ಯಾಕೇಜ್ ವಿಸ್ತರಿಸುವಂತೆ ಬಂಜಾರ ವಿದ್ಯಾರ್ಥಿಗಳ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶರಾಮ ನಾಯ್ಕ ಒತ್ತಾಯಿಸಿದ್ದಾರೆ.
ತಾಂಡಗಳು ಇನ್ನೂ ಕಂದಾಯ ಗ್ರಾಮಗಳಾಗಿ ಪರಿವರ್ತನೆ ಆಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ವಿಶೇಷ ಪ್ಯಾಕೇಜ್ ಸಹಿತ ಸಮುದಾಯದ ಪ್ರಗತಿಗೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.