ಜಿಲ್ಲೆ

ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ

Chitradurga

ಚಿತ್ರದುರ್ಗ: ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡುವಂತೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬನ್ನಿಕಟ್ಟೆ ಆರ್.ಹನು ಮಂತಪ್ಪ ಮತದಾರರಿಗೆ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ನಗರದ ಸರ್ಕಾರಿ ವಿಜ್ಞಾನ ಕಾಲೇಜಲ್ಲಿ ಶನಿವಾರ ಆಯೋಜಿಸಿದ್ದ ಮತದಾನ, ಮೂಲ ಕರ್ತವ್ಯಗಳ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಶಿವಣ್ಣ ಮಾತನಾಡಿ, ಉತ್ತಮ ಪ್ರಮಾಣದಲ್ಲಿ ಮತದಾನವಾಗದೇ ಒಳ್ಳೆ ನಾಯಕನ ಆಯ್ಕೆ ಸಾಧ್ಯವಾಗದು ಎಂದರು. ಡಾ.ಕೆ.ಕೆ.ಕಾಮಾನಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಉಪಾಧ್ಯಕ್ಷ ಟಿ.ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಅನಿಲ್‌ಕುಮಾರ್, ಪ್ರಾಂಶುಪಾಲ ಡಾ. ಬಸವರಾಜಪ್ಪ ಇದ್ದರು.