ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕ, ಚಳ್ಳಕೆರೆ ಮಂಡಲ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಬುಧವಾರ ನಡೆಸಿದ ಪ್ರತಿಭಟನೆಯಲ್ಲಿ ಮೇಘರಾಜ್ ಮಾತನಾಡಿದರು. ನೇರ್ಲಗುಂಟೆ ತಿಪ್ಪೇಸ್ವಾಮಿ, ಕುಮಾರಸ್ವಾಮಿ, ವೆಂಕಟೇಶ್‌ಯಾದವ್, ಮೋಹನ್‌ಕುಮಾರ್, ರಾಮದಾಸ್, ಲಕ್ಷಿ÷್ಮÃ, ಜಗದಾಂಬ, ಶಾಂತಮ್ಮ ಇತರರಿದ್ದರು.
- ಬಿಜೆಪಿ ಕಾರ್ಯಕರ್ತರಿಂದ ವಾಗ್ದಾಳಿ
- ಮುಂದುವರಿದ ಧರಣಿ
- ಸಂಪುಟದಿAದ ವಜಾಗೊಳಿಸಬೇಕು.
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಽ ನೀತಿ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ, ಚಳ್ಳಕೆರೆ ಮಂಡಲ ಕಾರ್ಯಕರ್ತರು ನಡೆಸುತ್ತಿರುವ ಧರಣಿ ಮೂರನೇ ದಿನವಾದ ಬುಧವಾರವೂ ಮುಂದುವರಿ ಯಿ ತು.
ಪಕ್ಷದ ವಿಭಾಗ ಪ್ರಭಾರಿ ಮೇಘರಾಜ್ ಮಾತನಾಡಿ, ರಾಜ್ಯದಲ್ಲಿ ದಲಿತ ಸಮಾಜದವರು, ರೈತರು, ಮಹಿಳೆಯರು ಹಾಗೂ ಯುವ ಸಮೂಹದ ಹಿತ ಕಾಯುವಲ್ಲಿ ಕಾಂಗ್ರೆಸ್ ವಿ-Àಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಶೇ.೧೮-೨೪ರಷ್ಟು ಅನುದಾನದಲ್ಲಿ ಸುಮಾರು ೩೫ ಸಾವಿರ ಕೋಟಿ ರೂ.ಗಿಂತಲೂ ಹೆಚ್ಚಿನ ಹಣ ನೌಕರರ ಸಂಬಳ ವಿತರಣೆ ಇನ್ನಿತರೆ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂ ದು ಆರೋಪಿಸಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ರೂ. ಬೃಹತ್ ಮೊತ್ತವನ್ನು ತೆಲಂಗಾಣ, ಆಂಧ್ರಪ್ರದೇಶದ ಚುನಾವಣೆಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂಬAಧ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿAದ ವಜಾಗೊಳಿಸಬೇಕು. ಅಲ್ಲ ದೆ, ರಾಜ್ಯ ಎಸ್ಟಿ ಸಮುದಾಯದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂನAತೆ ಬಳಸಿಕೊಂಡಿದೆ. ಚಿತ್ರದುರ್ಗ ಒಳಗೊಂಡು ರಾಜ್ಯದ ಬಹುತೇಕ ಜಿ¯್ಲೆಗಳಲ್ಲಿ ಭೀಕರ ಬರ ಎದುರಾಗಿದೆ.
ಹೀಗಿರುವಾಗ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಅನ್ನದಾತರ ಹಿತ ಬಲಿಕೊಟ್ಟು, ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಿರುವುದು ರೈತ ವಿರೋಽ ಧೋರಣೆ ಎಂದು ಕಿಡಿಕಾರಿದರು.
ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ, ಚುನಾವಣೆಗಳಿಗೆ ಹಣ ಖರ್ಚು ಮಾಡುತ್ತಿದೆಯೇ ಹೊರತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿಲ್ಲವೆಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಹಿರಿಯ ನಾಗರಿಕರು, ಎಸ್ಸಿ-ಎಸ್ಟಿ ಜನಸಂಖ್ಯೆ ಹೆಚ್ಚಿದ್ದರೂ, ಅವರ ಕ್ಷೇಮಾಭಿವೃದ್ಧಿಗೆ ಯಾವ ಯೋಜನೆಗಳನ್ನು ರೂಪಿಸಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡುತ್ತಿಲ್ಲವೆಂದು ಆರೋಪಿಸಿದರು.
ಚಳ್ಳಕೆರೆ ಮಂಡಲ ಅಧ್ಯಕ್ಷ ಸುರೇಶ್ ಮಾತನಾಡಿ, ಪ್ರಕರಣ ಸಂಬAಧ ನಾಗೇಂದ್ರ ಅವರು ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.
ಪಕ್ಷದ ಜಿ¯್ಲÁಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಪದಾಽಕಾರಿಗಳಾದ ವೆಂಕಟೇಶ್‌ಯಾದವ್, ಜಿ.ಎಚ್. ಮೋಹನಕುಮಾರ್, ರಾಮದಾಸ್, ಓಬಳೇಶ್, ಸುರೇಶ್, ಲಿಂಗರಾಜು, ಬಂಡೆ ರಂಗಪ್ಪ, ಶಶಿಧರ್ ರೆಡ್ಡಿ, ಪರಶುರಾಮï, ಮಂಡಿಸೀನಪ್ಪ, ಜಗದಾಂಬ, ಲಕ್ಷಿ÷್ಮÃ, ಶಾಂತಮ್ಮ, ದೇವರಹಳ್ಳಿ ಶೋಭರಾಜ್, ನಾಗರಾಜ್, ಶ್ರೀನಿವಾಸ್, ರಂಗಸ್ವಾಮಿ ಇತರರು ಇದ್ದರು.