ಚಿತ್ರದುರ್ಗದಲ್ಲಿ ಬುಧವಾರ ಸ್ವಯಂ ಜನಗಣತಿ ಪ್ರಕ್ರಿಯೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡಿಸಿ ಬಿ.ಟಿ.ಕುಮಾರಸ್ವಾಮಿ, ಡಾ.ಜಿ.ಪಿ.ರೇಣುಪ್ರಸಾದ್, ಎಸ್. ಲಕ್ಷಿ÷್ಮÃ ಇತರರು ಇದ್ದರು.
- ಮೊದಲು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸಿ
- ಅಽಕಾರಿ,ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ
- ವಿದ್ಯಾರ್ಥಿಗಳಿಗೂ ತರಬೇತಿ ನೀಡಿ ಪ್ರೋತ್ಸಾಹಿಸಿ
ಚಿತ್ರದುರ್ಗ: ಭಾರತದ ಜನಗಣತಿ-೨೦೨೭ರ ಅಂಗವಾಗಿ ಜಿಲ್ಲೆಯಲ್ಲಿ ಸ್ವಯಂ ಗಣತಿ ಪ್ರಕ್ರಿಯೆ ಚುರುಕುಗೊಳಿಸುವ ಮೂಲಕ ಸ್ವಯಂ ಗಣತಿ ಕರ‍್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರು ಅಽಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಜಿಲ್ಲೆಯಲ್ಲಿ ಸ್ವಯಂ ಗಣತಿ ಕರ‍್ಯ ಕೈಗೊಳ್ಳುವ ಸಂಬAಧ ವಿವಿಧ ಇಲಾಖಾ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಜನಗಣತಿಯ ಮೊದಲ ಹಂತ ಮನೆ ಪಟ್ಟಿ ತಯಾರಿಕೆ ಈಗಾಗಲೇ ಆರಂಭವಾಗಿದೆ. ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ `ಸ್ವಯಂ ಗಣತಿ' ಕಾರ್ಯವನ್ನು ಚುರುಕುಗೊಳಿಸಬೇಕು.
ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳ ಮುಖ್ಯಸ್ಥರು, ಅಽಕಾರಿಗಳು ಹಾಗೂ ಗ್ರೂಪ್ ಡಿ ವರೆಗಿನ ಎಲ್ಲ ಸಿಬ್ಬಂದಿ ಮೊದಲು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸಬೇಕು.
ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಯ ಶೇ.೧೦೦ ಸ್ವಯಂ ಗಣತಿ ಪೂರ್ಣಗೊಳಿಸಿರುವ ಬಗ್ಗೆ ಅಕ್ನಾಲೆಡ್ಜ್ಮೆಂಟ್ ಸಂಖ್ಯೆಗಳ ಪಟ್ಟಿಯನ್ನು ಮುಂಬರುವ ಸೋಮವಾರದೊಳಗೆ ಚುನಾವಣಾ ಶಾಖೆಗೆ ಸಲ್ಲಿಸಬೇಕೆಂದರು.
ನೆರೆಯ ಜಿಲ್ಲೆಗಳಲ್ಲಿ ಸ್ವಯಂ ಗಣತಿ ಪ್ರಕ್ರಿಯೆ ಶೇ.೪-೫ ಪ್ರಗತಿ ಆಗಿದ್ದರೆ, ನಮ್ಮ ಜಿಲ್ಲೆಯಲ್ಲಿ ಶೇ.೦.೬೪ ದಾಖಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಎಚ್‌ಒ ಹಾಗೂ ಟಿಎಚ್‌ಒಗಳು ತಮ್ಮ ಸಿಬ್ಬಂದಿ ಪಟ್ಟಿ ಸಿದ್ಧಪಡಿಸಬೇಕು. ಡಿಡಿಪಿಐ ಅವರು ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ಎಸ್‌ಡಿಎಂಸಿ ಸದಸ್ಯರನ್ನು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳುವಂತೆ ಮಾಡಬೇಕು. ಗ್ರಾಪಂ ಮಟ್ಟದಲ್ಲಿ ಪಿಡಿಒಗಳು, ಕಾರ್ಯದರ್ಶಿ ಗಳು ಮತ್ತು ಸದಸ್ಯರು ಸಕ್ರಿಯವಾಗಿ ಭಾಗವಹಿಸಬೇಕು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರು, ಅಡುಗೆ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಪ್ರತಿ ಸಿಬ್ಬಂದಿಯೂ ಸ್ವಯಂ ಗಣತಿಯಲ್ಲಿ ಪಾ ಲ್ಗೊಳ್ಳುವಂತೆ ಆಯಾ ಇಲಾಖಾ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕು. ೧೮ ವರ್ಷ ಮೇಲ್ಪಟ್ಟ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಅ ವರ ಕುಟುಂಬದ ವಿವರಗಳನ್ನು ಆನ್‌ಲೈನ್ ಮೂಲಕ ದಾಖಲಿಸಲು ಪ್ರೋತ್ಸಾಹಿಸಬೇಕು. ಏ.೧೫ ರವರೆಗೆ ಸ್ವಯಂ ಗಣತಿಗೆ ಅವಕಾಶವಿದೆ ಎಂದರು.
ನಗರಸಭೆ ಪೌರಾಯುಕ್ತೆ ಎಸ್.ಲಕ್ಷಿ÷್ಮÃ, ಚುನಾವಣಾ ತಹಸೀಲ್ದಾರ್ ಬೀಬೀ -Áತಿಮಾ, ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಸಂಖ್ಯಾ ಸಂಗ್ರಹಣಾಽಕಾರಿ ರವಿಕುಮಾರ್, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ರಾಘವೇAದ್ರ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಲ್ಲಿಕಾರ್ಜುನ್, ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಜೆ.ವೈಶಾಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಽಕಾರಿ ಜಿ.ರೇಖಾ ಇತರರು ಇದ್ದರು.