ಚಿತ್ರದುರ್ಗದ ವಕೀಲರ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯಲ್ಲಿ ರೋಣ್ ವಾಸುದೇವ್, ಎಚ್.ಎಸ್. ಮಹೇಶ್ವರಪ್ಪ, ವೀರಣ್ಣ ಸೋಮಶೇಖರ್, ಸಿ.ಎಚ್. ಗಂಗಾಧರ್, ಡಿ. ಮಮತಾ, ಎಂ. ವಿಜಯï, ರಶ್ಮಿ ಎಸ್. ಮರಡಿ, ಕೆ.ಎಸ್. ಸಾವಿತ್ರಮ್ಮ ಇತರರಿದ್ದರು.
- ಜಿ¯್ಲÁ ನ್ಯಾಯಾಽÃಶ ರೋಣ್ ವಾಸುದೇವ್ ಹೇಳಿಕೆ
- ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ
- ಚಿತ್ರದುರ್ಗ ವಕೀಲರ ಸಂಘ
ಚಿತ್ರದುರ್ಗ: ಬರೀ ಪೀಠಿಕೆ ಓದಿದರೆ ಸಾಲದು, ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಇಂದಿನ ಅಗತ್ಯ ಎಂದು ಪ್ರಧಾನ ಜಿ¯್ಲÁ ಮತ್ತು ಸತ್ರ ನ್ಯಾಯಾಽÃಶ ರೋಣ್ ವಾಸುದೇವ್ ಹೇಳಿದರು.
ನಗರದ ವಕೀಲರ ಭವನದಲ್ಲಿ ಶುಕ್ರವಾರ ಚಿತ್ರದುರ್ಗ ವಕೀಲರ ಸಂಘ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಂವಿಧಾನ ಪೀಠಿಕೆ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಗುತ್ತಿದೆ ಮತ್ತು ವಾಚಿಸಲಾಗುತ್ತಿದೆ. ಬಾಬಾ ಸಾಹೇಬï ಅಂಬೇಡ್ಕರ್ ಅವರು ಕೇವಲ ಪೀಠಿಕೆಗೆ ಸೀಮಿತವಾಗಿಲ್ಲ, ಅವರು ಇಡೀ ಸಂವಿಧಾನವನ್ನು ಆವರಿಸಿಕೊಂಡಿದ್ದಾರೆ. ಕೇವಲ ಪೀಠಿಕೆ ವಾಚಿಸಿ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಆಚರಣೆಗೆ ತರದಿದ್ದರೆ ಪೀಠಿಕೆ ವಾಚನಕ್ಕೆ ಅರ್ಥವೇ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಯಾವಾಗಲೂ ನಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತೇವೆಯೇ ಹೊರತು, ಸಂವಿಧಾನದ ಭಾಗ ೪ ಎ ನಲ್ಲಿ ಉ¯್ಲೆÃಖಿಸಲಾದ ಮೂಲಭೂತ ಕರ್ತವ್ಯಗಳ ಬಗ್ಗೆ ಗಮನ ಹರಿಸುವುದಿಲ್ಲ. ಪ್ರತಿಯೊಬ್ಬರೂ ಆತ್ಮವಿಮರ್ಶೆ ಮಾಡಿಕೊಂಡು ದೇಶಕ್ಕೆ ಪ್ರಾಮಾಣಿಕ ವಾಗಿ ಸೇವೆ ಸಲ್ಲಿಸುತ್ತಿದ್ದೇವೆಯೇ ಮತ್ತು ಭ್ರಾತೃತ್ವ ಬೆಳೆಸುತ್ತಿದ್ದೇವೆಯೇ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು.
ಅಂಬೇಡ್ಕರ್ ಅವರು ನೀಡಿದ ಸಂದೇಶಗಳನ್ನು ದೈನಂದಿನ ಜೀವನದಲ್ಲಿ ಪಾಲಿಸಿದಾಗ ಮಾತ್ರ ಆ ಹಿರಿಯ ಚೇತನಕ್ಕೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ. ಕೇವಲ ವರ್ಷಕ್ಕೊಮ್ಮೆ ಕಾರ್ಯಕ್ರಮ ಆಯೋಜಿಸಿ ಅವರನ್ನು ನೆನೆಯುವುದಕ್ಕಿಂತ, ಅವರ ಆದರ್ಶಗಳನ್ನು ಅನುಸರಿಸುವುದು ಮುಖ್ಯ ಎಂದು ಹೇಳಿದರು.
ಚಿತ್ರದುರ್ಗ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ ಮಾತನಾಡಿ, ನಾಗರಿಕರು ಕೇವಲ ಹಕ್ಕುಗಳಿಗೆ ಹೋರಾಟ ನಡೆಸದೆ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಮಾಡಿದರೆ ಮಾತ್ರ ಭಾರತ ವಿಶ್ವಮಟ್ಟದಲ್ಲಿ ಮೊದಲ ಸ್ಥಾನಕ್ಕೇರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಅಂಬೇಡ್ಕರ್ ಸಂವಿಧಾನ ಶಿಲ್ಪಿ ಮಾತ್ರವಲ್ಲ, ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು. ೧೯೨೩ರಲ್ಲಿ ಅವರು ಇಂಗ್ಲೆAಡ್‌ನಲ್ಲಿ ಮಂಡಿಸಿದ ಆರ್ಥಿಕ ಪ್ರಬಂಧ ಮತ್ತು ರೂಪಾಯಿಯ ಮೌಲ್ಯದ ಕುರಿತಾದ ಅವರ ಚಿಂತನೆಗಳು ೧೯೩೫ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಪ್ರೇರಣೆಯಾದವು ಎಂದು ತಿಳಿಸಿದರು.
ದೇಶದ ಸಮೃದ್ಧಿಗೆ ನದಿಗಳ ಜೋಡಣೆಯಾಗಬೇಕು ಎಂಬ ಕನಸನ್ನು ಅಂಬೇಡ್ಕರ್ ಕಂಡಿದ್ದರು. ಮಹಿಳೆ ಮತ್ತು ಪುರುಷರಿಗೆ ಸ ಮಾನ ಶಿಕ್ಷಣ ದೊರೆತಾಗ ಮಾತ್ರ ದೇಶ ಅಭಿವೃದ್ಧಿ ಹೊಂದುತ್ತದೆ ಎಂದು ಪ್ರತಿಪಾದಿಸಿದ್ದರು.
ಸುಮಾರು ೪೦ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಅನುಗುಣವಾಗಿ ಸಮಾನತೆಯ ಸಂವಿಧಾನ ನೀಡಿದ ಮಹಾನ್ ನಾಯಕನನ್ನು ಸ್ಮರಿಸುವುದು ನಮ್ಮೆಲ್ಲರ ಸೌಭಾಗ್ಯ ಎಂದರು.
೧ನೇ ಅಪರ ಜಿ¯್ಲÁ ಮತ್ತು ಸತ್ರ ನ್ಯಾಯಾಽÃಶ ವೀರಣ್ಣ ಸೋಮಶೇಖರ್, ೨ನೇ ಅಪರ ಜಿ¯್ಲÁ ಮತ್ತು ಸತ್ರ ನ್ಯಾಯಾಽÃಶ ಸಿ.ಎಚ್. ಗಂಗಾಧರ್, ಪ್ರಧಾನ ಹಿರಿಯ ಸಿವಿಲï ನ್ಯಾಯಾಽÃಶೆ ಡಿ. ಮಮತಾ, ಹಿರಿಯ ಸಿವಿಲ್ ನ್ಯಾಯಾಽÃಶರು ಹಾಗೂ ಜಿ¯್ಲÁ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯï.
ಪ್ರಧಾನ ಸಿವಿಲï ನ್ಯಾಯಾಽÃಶೆ ರಶ್ಮಿ ಎಸ್. ಮರಡಿ, ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್. ಸಾವಿತ್ರಮ್ಮ, ಪ್ರಧಾನ ಕಾರ್ಯ ದರ್ಶಿ ಎಚï. ಓ. ಜಗದೀಶ್ ಗುಂಡೇರಿ, ವಕೀಲರಾದ ಬಿಸ್ನಳ್ಳಿ ಜಯಣ್ಣ, ಟಿ.ಎಚ್. ಹನುಮಂತಪ್ಪ, ಚಂದ್ರಪ್ಪ ಇತರರು ಇದ್ದರು.