ಜಿಲ್ಲೆಯಲ್ಲಿ ಆಯೋಜಿಸಿರುವ ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಚಿತ್ರದುರ್ಗದಲ್ಲಿ ಮಂಗಳವಾರ ಜಿಪಂ ಸಿಇಒ ಡಾ.ಎಸ್. ಆಕಾಶ್ ಚಾಲ ನೆ ನೀಡಿದರು. ಎಂ. ರಾಘವೇಂದ್ರ, ಜಗನ್ನಾಥ್, ರಣವೀರ್, ಮಹೇಶ್ವರಪ್ಪ, ತಿಪ್ಪೇಸ್ವಾಮಿ ಇತರರು ಇದ್ದರು.
- ಜಿಪಂ ಸಿಇಒ ಡಾ.ಎಸ್.ಆಕಾಶ್
- ಕೆವೈಸಿ ಅಪ್‌ಡೇಟ್
- ಆರ್ಥಿಕ ಸಾಕ್ಷರತಾ ಸಪ್ತಾಹ
ಚಿತ್ರದುರ್ಗ: ಆರ್ಥಿಕ ವ್ಯವಹಾರಗಳಲ್ಲಿ ಕೆವೈಸಿ ಅಪ್‌ಡೇಟ್ ಬಹಳ ಮುಖ್ಯ ಎಂದು ಜಿಪಂ ಸಿಇಒ ಡಾ.ಎಸ್.ಆಕಾಶ್ ಹೇಳಿದರು.
ಜಿಪಂ ಹಾಗೂ ಲೀಡ್‌ಬ್ಯಾಂಕ್ ಜಿಲ್ಲಾದ್ಯಂತ ಆಯೋಜಿಸಿರುವ ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳ ವಾರ ಚಾಲನೆ ನೀಡಿ ಮಾತನಾಡಿದ ಅವರು, ಬ್ಯಾಂಕ್ ಖಾತೆಗಳಲ್ಲಿ ಇಕೆವೈಸಿ ಮತ್ತು ಸಿಕೆವೈಸಿ ಮಾಡುವ ವಿಧಾನಗಳು ಹಾಗೂ ಇವುಗಳಿಂದಾಗುವ ಅನುಕೂಲಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಇರಬೇಕು ಎಂದರು.
ಆರ್ಥಿಕ ಸಾಕ್ಷರತಾ ಸಪ್ತಾಹದಲ್ಲಿ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಿ ಸಪ್ತಾಹ ಯಶಸ್ವಿಗೊಳಿಸುವಂತೆ ಸಿಇಒ ಅಽಕಾರಿಗಳಿಗೆ ಸೂಚಿಸಿದರು.
ಲೀಡ್‌ಬ್ಯಾಂಕ್ ವ್ಯವಸ್ಥಾಪಕ ಎಂ. ರಾಘವೇಂದ್ರ, ಆರ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ಜಗನ್ನಾಥ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ರಣವೀರ್, ಎಸ್‌ಬಿಐ ವ್ಯವಸ್ಥಾಪಕ ಮಹೇಶ್ವರಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ಸಲಹೆಗಾರ ತಿಪ್ಪೇಸ್ವಾಮಿ ಇತರರು ಇದ್ದರು.