ನೀಟ್ ಪರೀಕ್ಷೆ ಅವಾಂತರದಿAದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಎಐಡಿಎಸ್‌ಒ ನೇತÊತ್ವದಲ್ಲಿ ವಿದ್ಯಾರ್ಥಿಗಳು ಚಿತ್ರದುರ್ಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಮಹಾಂತೇಶ ಬಿಳೂರ್, ಕೆ. ಈರಣ್ಣ, ಪ್ರಹ್ಲಾದ್ ಇತರರು ಇದ್ದರು. 
ಚಿತ್ರದುರ್ಗ

ಎನ್‌ಟಿಎ, ಕೇಂದ್ರ ಸರ್ಕಾರದ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ

ಡಿ.ಪಿ.ನಾಗರಾಜ ಶ್ರೇಷ್ಠಿ
ಚಿತ್ರದುರ್ಗ: ನೀಟ್ ಪರೀಕ್ಷೆ ಅವಾಂತರ, ಕೇಂದ್ರ ಸರ್ಕಾರದ ಬೇಜವಾಬ್ದಾರಿತನದಿಂದ ಆಗುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಎಐಡಿಎಸ್‌ಒ ನೇತÊತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ನಗರದ ಒನಕೆ ಓಬವ್ವ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಎನ್‌ಟಿಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬಿಳೂರ್ ಮಾತನಾಡಿ, ಮೇ ೩ರಂದು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆಗಿ ಟೆಲಿಗ್ರಾಮ್‌ನಲ್ಲಿ ಹರಿದಾಡಿತ್ತು. ಆದರೂ, ಪರೀಕ್ಷೆ ನಡೆಸಿದ್ದ ಎನ್‌ಟಿಎ ಬಳಿಕ ರದ್ದುಗೊಳಿಸಿತ್ತು. ಇದರಿಂದ ವಿದ್ಯಾರ್ಥಿಗಳ ವರ್ಷದ ಪರಿಶ್ರಮ ನೀರಿನಲ್ಲಿ ಹೋಮ ಮಾಡಿದಂತಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ, ಎನ್‌ಟಿಎ ಬೇಜವಾಬ್ದಾರಿತನದಿಂದ ಆಘಾತಕ್ಕೆ ಒಳಗಾದ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ. ಜೂನ್ ೨೧ ರ ಮರುಪರೀಕ್ಷೆ ಹತ್ತಿರವಾಗುತ್ತಿದ್ದಂತೆ ಆತ್ಮಹತ್ಯೆಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ದೇಶವ್ಯಾಪಿ ೧೬ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಶಿಕ್ಷಣದ ಖಾಸಗೀಕರಣ, ವ್ಯಾ ಪಾರೀಕರಣದ ವಿರುದ್ಧ ವಿದ್ಯಾರ್ಥಿಗಳು ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು. ಜಿಲ್ಲಾ ಸಂಚಾಲಕ ಕೆ. ಈರಣ್ಣ ಮಾತ ನಾಡಿ ದರು. ಪ್ರಹ್ಲಾದ್ ಮತ್ತಿತರರು ಇದ್ದರು.