ಮಹಿಳೆಯರು, ಮಕ್ಕಳ ಸಮಸ್ಯೆಗಳ ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಸಮಿತಿ ಪ್ರ ಮುಖರು ಚಿತ್ರದುರ್ಗದಲ್ಲಿ ಬುಧವಾರ ಜಿಲ್ಲಾಽಕಾರಿ ಟಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು. ಡಿ. ಸುಜಾತಾ, ಕುಮುದಾ, ಅಕ್ಷತಾ, ಬಿಂದು, ಜ್ಯೋತಿ ಇದ್ದರು.
- ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ
- `ಇವ ನಮ್ಮವ' ಕಾಯ್ದೆ
- ಕಾನೂನು ಕ್ರಮ
ಚಿತ್ರದುರ್ಗ: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಽಕಾರಿ ಟಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಾಲ್ಯ ವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ ಕೊಲೆ, ಲಿಂಗ ತಾರತಮ್ಯ, ಮರ್ಯಾದೆಗೇಡು ಹತ್ಯೆ, ಅಪೌಷ್ಠಿಕತೆ, ಕೌಟುಂಬಿಕ ದೌರ್ಜನ್ಯ ತಡೆ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕಾನೂನು ಕ್ರಮಗಳನ್ನು ಸರ್ಕಾರಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು.
ಉದ್ಯೋಗದ ಸ್ಥಳ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಆಂತರಿಕ ದೂರು ಸಮಿತಿ ರಚನೆ ಖಾತ್ರಿಪಡಿಸಬೇಕು.`ಇವ ನಮ್ಮವ' ಕಾಯ್ದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದು ಸೇರಿ ಮಹಿಳೆ, ಮಕ್ಕಳ ಪರವಾದ ಹಲವು ಕಾನೂನು ಕಟ್ಟಳೆಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಎಂಎಸ್‌ಎಸ್ ಜಿಲ್ಲಾ ಸಂಚಾಲಕಿ ಡಿ. ಸುಜಾತಾ, ಸಹ ಸಂಚಾಲಕಿ ಕುಮುದಾ, ಸದಸ್ಯರಾದ ಅಕ್ಷತಾ, ಬಿಂದು ಹಾಗೂ ಜ್ಯೋತಿ ಇದ್ದರು.