ಚಿತ್ರದುರ್ಗ: ಕೇಂದ್ರ ಹಣಕಾಸು ಸೇವೆಗಳ ಇಲಾಖೆ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನದ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್ ಹೇಳಿದರು.
ಚಿತ್ರದುರ್ಗ ತಾಲೂಕು ಯರೇಹಳ್ಳಿಯಲ್ಲಿ ಬುಧವಾರ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವಿಶೇಷ ಅಭಿಯಾನ ಈಗಾಗಲೇ ಅ.೨೧ರಿಂದ ಪ್ರಾರಂಭವಾಗಿದ್ದು, ಡಿಸೆಂಬರ್ ೩೧ರವರೆಗೆ ನಡೆಯಲಿದೆ. ಪ್ರತಿ ನಾಗರಿಕನಿಗೂ ಹಣಕಾಸು ಸೇವೆಗಳನ್ನು ಸುಲಭವಾಗಿ ತಲುಪಿಸುವುದು ಮತ್ತು ಸಾರ್ವಜನಿಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಶಿಬಿರದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PIಒಒಆ್ಗ), ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PIಖ ಆ್ಗ) ಹಾಗೂ ಅಟಲ್ ಪಿಂಚಣಿ ಯೋಜನೆಗೆ (ಅP್ಗ) ಹೊಸ ನೋಂದಣಿ ಮತ್ತು ಆಧಾರ್ ಜೋಡಣೆಗೆ ಅವಕಾಶ ಕಲ್ಪಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್(ಓಇಇ)ಮತ್ತು ಪ್ರಧಾನ ಮಂತ್ರಿ -Àಸಲ್ ಬಿಮಾ ಯೋಜನೆ (PIಊಆ್ಗ) ಅರ್ಜಿಗಳ ಸಂಗ್ರಹ ನಡೆಯಲಿದೆ.
ಜನಧನ(PIಒಈ್ಗ)ಮತ್ತು ಸಾಮಾನ್ಯ ಉಳಿತಾಯ ಖಾತೆಗಳಿಗೆ ಮರು ಕೆವೈಸಿ ಮಾಡುವುದು, ನಿಷ್ಕಿçಯಗೊಂಡ ಖಾತೆಗಳನ್ನು ಪುನಃ ಸಕ್ರಿಯಗೊಳಿಸುವುದು, ಬಾಕಿ ಇರುವ ಖಾತೆಗಳಿಗೆ ಸಿಕೆವೈಸಿ ಐಡಿ ಸೃಷ್ಟಿಸುವುದು, ನಾಮಿನಿ ವಿವರ ನವೀಕರಣ ಹಾಗೂ ಹಕ್ಕು ಪಡೆಯದ ಠೇವಣಿಗಳ ಇತ್ಯರ್ಥಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಸಾರ್ವಜನಿಕರಿಗೆ ಹಣಕಾಸು ಜಾಗೃತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದರು.
ತಮ್ಮ ಗ್ರಾಪಂ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಈ ವಿಶೇಷ ಶಿಬಿರಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಹಣಕಾಸು ಸೇವೆಗಳು ಹಾಗೂ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಎ-ïಎಲ್ಸಿ ಮುರಳಿ, ಧನ್ಪೌಂಡೇಶನ್ನ ಲತಾ, ಯರೇಹಳ್ಳಿ ಗ್ರಾಪಂ ಮಾಜಿ ಸದಸ್ಯರು, ಗ್ರಾಮಸ್ಥರು ಇದ್ದರು.