ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್.
- ಫೆಬ್ರವರಿಯಲ್ಲಿ ಡಿಸಿಎಂ ಪರಿಶೀಲನೆ
- ರಸ್ತೆ ವಿಸ್ತರಣೆಗೆ ಅಗತ್ಯ ಕ್ರಮ
- ಟಾಫ್‌ಟೆನ್‌ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರಿ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಅಂದಾಜು ವೆಚ್ಚವನ್ನು ೨೭ ಸಾವಿರ ಕೋಟಿ ರೂ.ಗಳಿಗೆ ಪರಿಷ್ಕರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ಯೋಜನಾ ವೆಚ್ಚ ಹೆಚ್ಚಾಗಿದ್ದು, ಈ ಹಿಂದೆ ಘೋಷಿಸಿದ್ದ ೫೩೦೦ ಕೋಟಿ ರೂ. ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾ ಯಿಸಿದರು.
ಯೋಜನೆ ಅನುಷ್ಠಾನ ಚುರುಕಾಗಬೇಕಿದೆ. ಈ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಪರಿಷ್ಕೃತ ವೆಚ್ಚಕ್ಕೆ ಪೂರಕವಾಗಿ ಹೆಚ್ಚಿನ ಅನುದಾನ ಕಾಯ್ದಿರಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು. ಹಿಂದಿನ ಬಜೆಟ್‌ನಲ್ಲಿ ಕೇಂದ್ರದಿAದ ಕನಿಷ್ಠ ಒಂದು ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ನಿರೀಕ್ಷೆಯೊಂದಿಗೆ ೧೨೫೦ ಕೋಟಿ ರೂ.ಗಳನ್ನು ರಾಜ್ಯಸರ್ಕಾರ ಕಾಯ್ದಿರಿಸಿತ್ತು.
ಆದರೆ ಕೇಂದ್ರದಿAದ ಯಾವುದೇ ಅನುದಾನ ಬರಲಿಲ್ಲ.
ರಾಜ್ಯ ಸರ್ಕಾರವೇ ೭೦೦ ಕೋಟಿ ರೂ. ಗಳನ್ನು ೨೦೨೫-೨೬ನೇ ಸಾಲಿನಲ್ಲಿ ಖರ್ಚು ಮಾಡಿದೆ. ಅನುದಾನಕ್ಕಾಗಿ ಸಂಸದರ ನೇತೃತ್ವದಲ್ಲಿ ನಿಯೋಗ ತೆರಳಿ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು. ಫೆಬ್ರವರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಭೇಟಿ ನೀಡಿ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ೧೦ನೇ ಸ್ಥಾನದೊಳಗೆ ಇರಬೇಕೆಂಬ ಗುರಿ ಇದೆ. ಈ ನಿಟ್ಟಿನಲ್ಲಿ ಜಿಪಂ ಸಿಇಒ ಡಾ.ಎಸ್.ಆಕಾಶ್ ವಿಶೇಷ ಕ್ರಮಗಳೊಂದಿಗೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಽಕಾರಿ ಹೊಸ ಕಚೇರಿ ಕಟ್ಟಡವನ್ನು ತೋಟಗಾರಿಕೆ ಇಲಾಖೆಗೆ ಸೇರಿದ ೧೪ ಎಕರೆ ಜಾಗದಲ್ಲಿ ನಿರ್ಮಿಸುವ ಉದ್ದೇಶವಿದೆ ಎಂದರು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ರಾ.ಹೆ. ಗಳಲ್ಲಿರುವ ಅವೈಜ್ಞಾನಿಕ ತಿರುವುಗಳು ಹಾಗೂ ರಸ್ತೆ ವಿನ್ಯಾಸ ಸರಿಪಡಿಸಲು ಎನ್‌ಎಚ್ ಅಽಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬ್ಲಾಕ್‌ಸ್ಪಾಟ್ ಗಳನ್ನು ಗುರುತಿಸಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಚಿತ್ರದುರ್ಗದ ಬಿಡಿ ರಸ್ತೆ ಸೇರಿ ವಿವಿಧ ಬಡಾವಣೆಗಳಲ್ಲಿ ಗ್ಯಾಸ್‌ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ಹಾಗೆಯೇ ಬಿ ಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪೂರ್ವಾನುಮತಿ ಪಡೆಯದೆ ರಸ್ತೆ ಅಗೆಯುವ ಏಜೆನ್ಸಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ರಸ್ತೆ ವಿಸ್ತರಣೆಗೆ ಜಿಲ್ಲಾಽಕಾರಿ ಕಟ್ಟಡ ಮಾಲೀಕರ ಅಹವಾಲು ಆಲಿಸುತ್ತಿದ್ದಾರೆ. ನಿಯಮ ಮೀರಿ ಕಟ್ಟಡ ನಿರ್ಮಾಣ ವಾಗಿದ್ದರೆ ಯಾವುದೇ ಪರಿಹಾರ ಸಿಗದು. ಟ್ರಕ್ ಟರ್ಮಿನಲ್ ನಿರ್ಮಾಣ ಕುರಿತು ಪರಿಶೀಲಿಸಲಾಗುವುದು ಎಂದರು.