ಚಿತ್ರದುರ್ಗದಲ್ಲಿ ಶುಕ್ರವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಜಿಪಂ ಸಿಇಒ ಡಾ.ಎಸ್. ಆಕಾಶ್, ಕೆ. ಜಯಲಕ್ಷಿ÷್ಮÃ, ರೇಷ್ಮಾ ಹಾನಗಲ್, ಅಮರನಾಥ್ ಜೈನ್ ಇತರರು ಇದ್ದರು.
- ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ತಾಕೀತು
- ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
- ಟೆಂಡರ್ ಪ್ರಕ್ರಿಯೆ
ಚಿತ್ರದುರ್ಗ: ಗ್ರಾಮೀಣ ಜನರಿಗೆ ಕುಡಿವ ನೀರು ಪೂರೈಸುವ ಜಲ ಜೀವನ್‌ಮಿಷನ್ ಕಾಮಗಾರಿ ವಿಳಂಬ ಮಾಡುತ್ತಿರುವ ಹಾಗೂ ನೋಟಿಸ್‌ಗೂ ಸ್ಪಂದಿಸದ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸುವಂತೆ ಜಿಪಂ ಸಿಇಒ ಡಾ.ಎಸ್.ಆಕಾಶ್ ಅಽಕಾರಿಗಳಿಗೆ ತಾ ಕೀತು ಮಾಡಿದರು.
ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಮಾತನಾಡಿ, ಜಲ ಜೀವನ್ ಮಿನಷ್ ಯೋಜನೆಯಡಿ ವಿವಿಧ ಬ್ಯಾಚ್‌ಗಳ ಅಡಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳು ೪-೫ ವರ್ಷಗಳಾದರೂ ಪೂರ್ಣಗೊಳಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ವಿಳಂಬಕ್ಕೆ ಕಾರಣರಾದವರಿಗೆ ಟೆಂಡರ್ ನೀಡದಂತೆ ಶಿ-Áರಸು ಮಾಡಿದರೆ ಸಾಲದು, ಅವರನ್ನು ಕಪ್ಪುಪಟ್ಟಿಗೆ ಸೇರಿಸಲು ಪ್ರಸ್ತಾ ವನೆ ಸಲ್ಲಿಸುವಂತೆ ಸೂಚಿಸಿದರು.
ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಸಂಪೂರ್ಣ ವಿವರ ಒಳಗೊಂಡ ವರದಿ ನೀಡಬೇಕು. ಒಟ್ಟು ಪ್ರಗತಿಯಲ್ಲಿರುವ ೫೬೦ ಕಾ ಮಗಾರಿಗಳ ಲೈನ್‌ಲಿಸ್ಟ್ ಸಿದ್ಧಪಡಿಸಿ, ಯಾವ ಕಾರಣಕ್ಕಾಗಿ ಕಾಮಗಾರಿ ವಿಳಂಬವಾಗಿದೆ ಮತ್ತು ಅದನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಕೂಡಲೇ ತಿಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇಗಳಿಗೆ ಸಿಇಒ ಸೂಚಿಸಿದರು.
೨೦೨೦-೨೧ನೇ ಸಾಲಿನಲ್ಲಿ ಕಸ ವಿಲೇವಾರಿ ಹೊಣೆಯನ್ನು ಗ್ರಾಪಂ ಮಟ್ಟದ ಒಕ್ಕೂಟಗಳಿಗೆ(ಜಿಪಿಎಲ್‌ಎ-ï)ವಹಿಸಲು ಸರ್ಕಾರ ಕೈಗೊಂಡಿದ್ದ ತೀರ್ಮಾನ ಸಂಪೂರ್ಣ ವಿ-Àಲವಾಗಿದೆ.
ಜಿಲ್ಲೆಯ ೧೮೯ ಗ್ರಾಪಂಗಳೂ ಜಿಪಿಎಲ್‌ಎ-ï ಒಕ್ಕೂಟಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೂ ಒಂದೇ ಒಂದು ಒಕ್ಕೂಟವೂ ಕಸ ವಿಂಗಡಣೆ ಮತ್ತು ವಿಲೇವಾರಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲವೆAದು ಬೇಸರ ವ್ಯಕ್ತಪಡಿಸಿದರು.
ಕೆಲವು ಜಿಲ್ಲೆಗಳಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಘನತ್ಯಾಜ್ಯ ನಿರ್ವಹಣೆ ಯಶಸ್ವಿಯಾಗಿ ಮಾಡಲಾಗುತ್ತಿದೆ. ಅದೇ ಮಾದರಿ ಯನ್ನು ಚಿತ್ರದುರ್ಗ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲೂ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.
ನಿಯಮಾವಳಿಗಳ ಪ್ರಕಾರ ಟೆಂಡರ್ ಪ್ರಕ್ರಿಯೆ ನಡೆಸಿ, ಸಮರ್ಥ ಏಜೆನ್ಸಿಗಳಿಗೆ ಜವಾಬ್ದಾರಿ ನೀಡುವ ಮೂಲಕ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಪಂ ಯೋಜನಾ ನಿರ್ದೇಶಕಿ ಕೆ. ಜಯಲಕ್ಷಿ÷್ಮÃ, ಸಹಾಯಕ ಯೋಜನಾಽಕಾರಿ ಡಿ.ಎಸ್. ಸುಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಅಮರನಾಥ್ ಜೈನ್, ಡಿಡಿಪಿಐ ಎಂ.ಆರ್. ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಎಚ್.ದಿವಾಕರ್ ಇನ್ನಿತರ ಅಽಕಾರಿಗಳು ಇದ್ದರು.
ಕಸ ವಿಲೇವಾರಿ, ನೈರ್ಮಲ್ಯ ನಿರ್ವಹಣೆ ಹಾಗೂ ಅವುಗಳ ಸುಸ್ಥಿರತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಗ್ರಾಪಂಗಳು ತಮ್ಮ ಒಟ್ಟು
ತೆರಿಗೆ ಸಂಗ್ರಹದ(ನಿಽ೧)ನಿರ್ದಿಷ್ಟ ಶೇಕಡಾವಾರು ಹಣವನ್ನು ಕಡ್ಡಾಯವಾಗಿ ನೈರ್ಮಲ್ಯ ಚಟುವಟಿಕೆಗಳಿಗೆ ಬಳಸುವಂತೆ ಸಿಇಒ ಆಕಾಶ್ ತಿಳಿಸಿದರು. ಇದಕ್ಕಾಗಿ ಶೀಘ್ರದಲ್ಲೇ ಗರಿಷ್ಠ ಮಿತಿ ನಿಗದಿಪಡಿಸಲಾಗುವುದು ಎಂದರು.