ಚಿತ್ರದುರ್ಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ಸಮುದಾಯ ಭವನದ ಡೈನಿಂಗ್ ಹಾಲ್ ಉದ್ಘಾಟನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರಸನ್ನನಾಥ ಸ್ವಾಮೀಜಿ, ಸಂಸದ ಗೋವಿಂದ ಎಂ.ಕಾರಜೋಳ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆ.ರಾಜು, ಆರ್.ಮಂಜುನಾಥ್, ರವೀಂದ್ರಪ್ಪ ಇತರರಿದ್ದರು. 
ಚಿತ್ರದುರ್ಗ

ಶಿಕ್ಷಣದಿಂದ ಯುವಪೀಳಿಗೆ ಪ್ರಗತಿ ಸಾಧ್ಯ

ಡಿ.ಪಿ.ನಾಗರಾಜ ಶ್ರೇಷ್ಠಿ

ಪ್ರಮುಖ ಮುಖ್ಯಾಂಶಗಳು

  • ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ
  • ಒಕ್ಕಗಲಿಗರ ಸಂಘದ ಪ್ರತಿಭಾ ಪುರಸ್ಕಾರ ಸಮಾರಂಭ
  • ಹಾಸ್ಟೆಲ್ ಮತ್ತು ಸಮುದಾಯ ಭವನ
ಚಿತ್ರದುರ್ಗ: ಅನ್ಯಾಯವಾದಾಗ ಸಂಘಟಿತವಾಗಿ ದನಿ ಎತ್ತಿದ್ದರೆ ಸಮಾಜದ ಮುಂದಿನ ಪೀಳಿಗೆಗೆ ದಾರಿ ಸುಗಮವಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒಕ್ಕಲಿಗರ ಸಮುದಾಯಕ್ಕೆ ಸಲಹೆ ನೀಡಿದರು.

ಜಿಲ್ಲಾ ಒಕ್ಕಲಿಗರ ಸಂಘದ ಸಮುದಾಯ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ, ಸಮುದಾಯ ಭವನದ ನೂತನ ಡೈನಿಂಗ್ ಹಾಲ್ ಉದ್ಘಾಟನೆ ಹಾಗೂ ರಾಜ್ಯ ಒಕ್ಕಲಿಗರ ಸಂಘದಿAದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ನಮ್ಮ ಸಮುದಾಯ ಯಾರನ್ನೂ ದ್ವೇಷಿಸದೆ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತದೆ. ಬೇರೆ ಸಮುದಾಯದವರನ್ನು ತುಳಿದು ಮೇಲೆ ಬರಬೇಕೆಂದು ಚಿಂತಿಸುವುದಿಲ್ಲ. ಪ್ರತಿ ತಾಲೂಕಿನಲ್ಲೂ ಹಾಸ್ಟೆಲ್ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಬೇಕು. ಶಿಕ್ಷಣದಿಂದ ಸಮುದಾಯದ ಪ್ರಗತಿ ಸಾಧ್ಯ, ಆಸ್ತಿ, ಅಂತಸ್ತಿಗಿAತ ವಿದ್ಯೆಗೆ ಹೆಚ್ಚಿನ ಮಹತ್ವವಿದೆ ಎಂದರು.
ಸಮುದಾಯದ ಅನೇಕರು ಮುಖ್ಯಮಂತ್ರಿಗಳಾಗಿದ್ದಾರೆ. ಅಽಕಾರ ಸಿಕ್ಕಾಗ ಮೈಮೇಲೆ ಹುಚ್ಚು ಬಂದAತೆ ಆಡುವಂಥವರು ಅಽಕಾರ ಹೋದ ಬಳಿಕ ಮೂಲೆ ಸೇರುತ್ತಾರೆ. ಅಽಕಾರದಲ್ಲಿದ್ದಾಗ ಸಮುದಾಯಕ್ಕೆ ಏನು ಮಾಡಿದ್ದೇನೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.
ವಿಧಾನಸೌಧದ ಎದುರು ಕೆಂಪೇಗೌಡರ ಪ್ರತಿಮೆ ನಮ್ಮ ಅಽಕಾರಾವಽ ಆಗಿದೆ. ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿ ನೂರು ಕೋಟಿ ರೂ.ಅನುದಾನ ಕೊಟ್ಟಿದೆ ಎಂದರು.
ಸAಸದ ಗೋವಿಂದ ಎಂ.ಕಾರಜೋಳ ಮಾತನಾಡಿ, ಹಿಂದಿನ ಕಾಲದಲ್ಲಿದ್ದ ಗುರುಕುಲ ಮತ್ತು ಆಶ್ರಮಗಳು ಈಗ ಮಠಗಳಾಗಿ ಶಿಕ್ಷಣಕ್ಕೆ ಒತ್ತು ಕೊಡುತ್ತಿವೆ. ಜಿಲ್ಲಾ ಒಕ್ಕಲಿಗರ ಸಂಘದ ಈ ಸಮುದಾಯ ಭವನದಲ್ಲಿ ನಿತ್ಯ ಕಲ್ಯಾಣ ಕಾರ್ಯಕ್ರಮಗಳು ನಡೆಯಲಿ. ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಿ ಬೆನ್ನುತಟ್ಟಿದಾಗ ಅವರಿಂದ ಇನ್ನೂ ಹೆಚ್ಚಿನ ಸಾಧನೆ ಸಾಧ್ಯವಾಗಲಿದೆ ಎಂದರು.
ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಶಿವಮೊಗ್ಗ ಜಿಲ್ಲೆಯ ಪ್ರತಿ ತಾಲೂಕಿ ನಲ್ಲೂ ಒಕ್ಕಲಿಗರ ಸಮುದಾಯ ಭವನಗಳಿವೆ. ಶಿಕ್ಷಣ ಕ್ಷೇತ್ರಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ಕೊಡುಗೆಯಿದೆ. ಶಿಕ್ಷಣದ ಕಡೆ ಮಕ್ಕಳು ಹೆಚ್ಚಿನ ಗಮನಹರಿಸಬೇಕು. ಸಮಾಜದ ಬಗ್ಗೆ ಪ್ರತಿಯೊಬ್ಬರಲ್ಲೂ ನಂಬಿಕೆ, ಶ್ರದ್ಧೆಯಿರಬೇಕು. ಭಗವಂತನಲ್ಲಿ ಭಕ್ತಿ ಇರಬೇಕು. ಸಾಧನೆಗೆ ಸಂಘ ಮನಸ್ಸು ಮಾಡಬೇಕು ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಜೆ.ರಾಜು, ಮಾಜಿ ನಿರ್ದೇಶಕ ಆರ್.ಮಂಜುನಾಥ್, ನಿವÊತ್ತ ಮುಖ್ಯ ಇಂಜಿನಿಯರ್ ಎಂ.ರವೀAದ್ರಪ್ಪ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ್, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಆರ್.ತಿಮ್ಮಯ್ಯ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಜಿ.ಪಿ.ಚೇತನ್ ಅಧ್ಯಕ್ಷತೆ ವಹಿಸಿದ್ದರು. ಎಂಎಲ್‌ಸಿ ಕೆ.ಎಸ್.ನವೀನ್, ಬಿ.ರಾಮಚಂದ್ರಪ್ಪ, ಹನುಮಂತೇಗೌಡ, ಲಕ್ಷಿ÷್ಮÃಕಾಂತ್ ಇತರ ಪ್ರಮುಖರು ಇದ್ದರು.