ಚಿತ್ರದುರ್ಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಎಚ್‌ಪಿವಿ ಲಸಿಕಾ ಕಾರ್ಯಕ್ರಮ ಕಾರ್ಯಪಡೆ ಸಭೆಯಲ್ಲಿ ಡಿಸಿ ಟಿ. ವೆಂಕಟೇಶ್, ಡಾ.ಜಿ.ಪಿ. ರೇಣುಪ್ರಸಾದ್, ಜಯಲಕ್ಷಿ÷್ಮÃ, ವಿಜಯ್‌ಕುಮಾರ್ ಇತರರು ಇದ್ದರು.
- ಜಿಲ್ಲಾಽಕಾರಿ ಟಿ. ವೆಂಕಟೇಶ್ ತಾಕೀತು
- ಕಾರ್ಯಕ್ರಮದ ಜಿಲ್ಲಾಮಟ್ಟದ ಕಾರ್ಯಪಡೆ ಸಭೆ
- ಲಸಿಕಾ ಅಭಿಯಾನ
ಚಿತ್ರದುರ್ಗ: ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಎಚ್‌ಪಿವಿ(ಹ್ಯೂಮನ್ ಪ್ಯಾಪಿಲೋಮ ವೈರಸ್)ಲಸಿಕೆ ಅತ್ಯಂತ ಪರಿಣÁಮಕಾರಿಯಾಗಿದ್ದು, ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ಅನುಷ್ಠಾನ ಮಾಡುವಂತೆ ಡಿಸಿ ಟಿ. ವೆಂಕಟೇಶ್ ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಎಚ್‌ಪಿವಿ ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿ, ಲಸಿಕೆ ನೀಡುವ ಮುನ್ನ ಶಾಲಾ ಹಂತದಲ್ಲಿ ಪಾಲಕರು, ಶಿಕ್ಷಕರ ಸಭೆ ನಡೆಸಿ ಲಸಿಕೆಯ ಮಹತ್ವ, ಅಗತ್ಯತೆ ಕುರಿತು ಅರಿವು ಮೂಡಿಸಬೇಕು.
ಪಾಲಕರಲ್ಲಿ ಇರಬಹುದಾದ ತಪ್ಪು ಕಲ್ಪನೆ ಹೋಗಲಾಡಿಸಬೇಕು. ಜಿಲ್ಲೆಯಲ್ಲಿ ಲಸಿಕಾ ಅಭಿಯಾನದ ಯಶಸ್ಸಿಗೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇನ್ನಿತರ ಎಲ್ಲ ಇಲಾಖೆಗಳ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಗೆ ೯ ಸಾವಿರ ರೂ.ಗಳಿಂದ ೧೫ ಸಾವಿರ ರೂ.ವರೆಗೂ ದರವಿದೆ. ಸರ್ಕಾರ ಇದನ್ನು ಉಚಿತ ವಾಗಿ ನೀಡುತ್ತಿದೆ. ಅರ್ಹ ವಯಸ್ಸಿನ ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಲಸಿಕೆ ಕುರಿತು ತಪ್ಪು ಮಾಹಿತಿ ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದರು.
ಜಿಲ್ಲಾ ಆರ್‌ಸಿಎಚ್ ಅಽಕಾರಿ ಡಾ.ಡಿ.ಎಂ. ಅಭಿನವ್ ಮಾತನಾಡಿ, ಗರ್ಭಕಂಠದ ಕ್ಯಾನ್ಸರ್ ತಡೆ ನಿಟ್ಟಿನಲ್ಲಿ ಮಾರ್ಗಸೂಚಿಯಂತೆ ೧೪ ವರ್ಷ ಪೂರೈಸಿದ ಮತ್ತು ೧೫ ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಎಚ್‌ಪಿವಿ ಲಸಿಕಾ ಅಭಿಯಾನದ -Àಲಾನುಭವಿಗಳೆಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು ೧೮,೨೬೭ ಹೆಣ್ಣು ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದರು.
ಅಭಿಯಾನದಲ್ಲಿ ಗಾರ್ಡಸಿಲ್ ಲಸಿಕೆ ಬಳಸಲಾಗುತ್ತಿದ್ದು, ಇದು ಎಚ್‌ಪಿವಿ ವೈರಸ್‌ನ ೬,೧೧,೧೬ ಮತ್ತು ೧೮ ಎಂಬ ನಾಲ್ಕು ರೂ ಪಾಂತರಗಳ ವಿರುದ್ಧ ರಕ್ಷಣೆ ನೀಡುತ್ತದೆ. ಜಿಲ್ಲೆಯ ೩೪೭ ಉಪ ಕೇಂದ್ರಗಳು, ೮೬ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ೧೧ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆ ಸೇರಿ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ ಲಭ್ಯವಿರುತ್ತದೆ.
ಕಳೆದ ಒಂದು ವಾರದಿಂದ ಆರಂಭವಾಗಿರುವ ಅಭಿಯಾನ ಮುಂದಿನ ಮೂರು ತಿಂಗಳ ಕಾಲ ನಡೆಯಲಿದೆ ಎಂದು ತಿಳಿಸಿದರು.
ನಿಗದಿತ ವಯೋಮಿತಿ ಮೀರಿದವರು, ಗರ್ಭಿಣಿಯರು, ಈಗಾಗಲೇ ಬೇರೆ ಲಸಿಕೆ ಪಡೆದವರು, ಲಸಿಕೆಯಿಂದ ಅಲರ್ಜಿ ಇತಿಹಾಸ ಇರುವವರು ಹಾಗೂ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಈ ಲಸಿಕೆ ನೀಡುವುದಿಲ್ಲ.
ಜಿಲ್ಲೆಯಲ್ಲಿ ೭೪ ವೈದ್ಯಾಽಕಾರಿಗಳು, ೪೨೩ ನರ್ಸಿಂಗ್ ಸಿಬ್ಬಂದಿ ಹಾಗೂ ೨೯೨ ಪಿಎಚ್‌ಸಿಒಗಳು ಅಭಿಯಾನದಲ್ಲಿ ಪಾಲ್ಗೊ ಳ್ಳುತ್ತಿವೆ. ಪಾಲಕರು ತಮ್ಮ ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕಾ ಶಿಬಿರಗಳನ್ನು ಆಯೋಜಿಸಬೇಕು ಎಂದು ಕೋರಿದರು.
ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್, ಜಿಪಂ ಯೋಜನಾ ನಿರ್ದೇಶಕಿ ಜಯಲಕ್ಷಿ÷್ಮÃ, ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆ ಉಪ ನಿರ್ದೇಶಕ ವಿಜಯ್‌ಕುಮಾರ್, ನಾನಾ ವೈದ್ಯಾಽಕಾರಿಗಳು, ಅಽಕಾರಿಗಳು ಇದ್ದರು.