ವಿವಿಧ ವಸತಿ ಶಾಲೆಗಳ ೬ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆ ಕುರಿತಂತೆ ಚಿತ್ರದುರ್ಗದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಬಿ.ಟಿ. ಕುಮಾರಸ್ವಾಮಿ, ಡಾ.ಕೆ.ಜೆ. ಕಾಂತರಾಜ್, ಎಂ.ಆರ್. ಮಂಜುನಾಥ್, ತಿಮ್ಮಯ್ಯ ಇತರ ಅಽಕಾರಿಗಳಿದ್ದರು.
- ೭೨೦೨ ವಿದ್ಯಾರ್ಥಿಗಳು ನೋಂದಣಿ
- ಜಿಲ್ಲೆಯಲ್ಲಿ ೨೧ ಎಕ್ಸಾಂ ಸೆಂರ‍್ಸ್
- ಪೂರ್ವಭಾವಿ ಸಭೆ
ಚಿತ್ರದುರ್ಗ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳ ೬ನೇ ತರಗತಿ ದಾಖಲಾತಿಗೆ ಮಾ.೧ರಂದು ಜಿಲ್ಲಾದ್ಯಂತ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಎಡಿಸಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.
ಪರೀಕ್ಷೆ ಸಂಬAಧ ಡಿಸಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮುರಾರ್ಜಿ ದೇಸಾ ಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್‌ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಽ, ಡಾ.ಬಿ.ಆರ್. ಅಂಬೇಡ್ಕರ್ ಮೊದಲಾದ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಽಕಾರ ಅಂದು ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೧ ರವರೆಗೆ ಜಿಲ್ಲೆಯ ೨೧ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲಿದೆ. ೭,೨೦೨ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ.
ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ, ಪರೀಕ್ಷಾ ಪಾವಿತ್ರ‍್ಯತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಅಽಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಬೈಲ್, ಎಲೆಕ್ಟಾçನಿಕ್ ಉಪಕರಣಗಳ ಬಳಕೆ ಆಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಸಂದರ್ಭದಲ್ಲಿ ತಪಾಸಣೆ ನಡೆಸಬೇಕು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ. ತಿಮ್ಮಯ್ಯ ಅವರು ಪ್ರವೇಶ ಪರೀಕ್ಷೆ ಕುರಿತು ಮಾಹಿತಿ ನೀಡಿದರು. ಪರಿಕ್ಷಾ ಕೇಂ ದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಸ್ವೀಕರಿಸಲು ೮ ಮಾರ್ಗಾಽಕಾರಿಗಳನ್ನು ನೇಮಿಸಲಾಗಿದೆ ಎಂದರು. ಎಸಿ ಡಾ. ಕೆ.ಜೆ. ಕಾಂತರಾಜು, ಡಿಡಿಪಿಐ ಎಂ.ಆರ್. ಮಂಜುನಾಥ್ ಮತ್ತಿತರ ಅಽಕಾರಿಗಳು ಇದ್ದರು.
ತಾಲೂಕು -ಕೇಂದ್ರ- ವಿದ್ಯಾರ್ಥಿಗಳ ಸಂಖ್ಯೆ
ಸುಗಮ, ಗೊಂದಲ ರಹಿತವಾಗಿ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸುವಂತೆ ಎಡಿಸಿ ಅಽಕಾರಿಗಳಿಗೆ ನಿರ್ದೇಶಿಸಿದರು.
-É.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-೧ನಡೆಯಲಿದೆ. ಜಿಲ್ಲೆಯಲ್ಲಿ ೧೪,೨೮೧ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ೨೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಅತೀ ಸೂಕ್ಷ÷್ಮ್ಮಕೇಂದ್ರಗಳ ಮೇಲೆ ವಿಶೇಷ ನಿಗಾ ವಹಿಸಬೇಕು ಎಂದರು.
ಪರೀಕ್ಷಾ ಅಕ್ರಮಕ್ಕೆ ಹಿಂದೆ ಇಲಾಖೆ ವಿಚಾರಣೆ ನಡೆಸಿ ಅಮಾನತು ಮಾಡಲಾಗುತ್ತಿತ್ತು. ಆದರೆ, ಈಗ ಪರೀಕ್ಷಾ ಅಕ್ರಮ ತಡೆಗೆ ಹೊಸ ಕಾನೂನು ಜಾರಿಗೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಎ-ïಐಆರ್ ದಾಖಲಿಸಿ ಕಠಿಣ ಶಿಕ್ಷೆ ವಿಽಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಖಚಿತಪಡಿಸಿಕೊಳ್ಳಬೇಕು ಎಂದರು.
ಡಿವೈಎಸ್‌ಪಿ ಅನಿಲ್ ನಾಗೇಗೌಡ ಮತ್ತಿತರರು ಇದ್ದರು.