ಚಿತ್ರದುರ್ಗದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮದಲ್ಲಿ ತಾಪಂ ಇಒ ವೈ. ರವಕುಮಾರ್, ವೀಣಾ, ಎಸ್. ಸಿದ್ದರಾಜು, ಡಿ. ಕುಮಾರ್, ಪಾವನ, ಕೆ. ಪವಿತ್ರಾ ಇತರರು ಇದ್ದರು. 
ಚಿತ್ರದುರ್ಗ

ಪಠ್ಯೇತರ ಚಟುವಟಿಕೆಗಳು ಏಕಾಗ್ರತೆಗೆ ಸಹಕಾರಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಪ್ರಮುಖ ಮುಖ್ಯಾಂಶಗಳು

  • ರಾಜ್ಯಬಾಲ ಭವನ ಸೊಸೈಟಿ
  • ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆ
  • ಮಕ್ಕಳ ಕಲಾ ಪ್ರತಿಭೆ
ಚಿತ್ರದುರ್ಗ: ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ವೇದಿಕೆ ನೀಡುವುದು ಬಾಲ ಭವನದ ಉದ್ದೇಶವಾಗಿದೆ ಎಂದು ತಾಪಂ ಇಒ ವೈ. ರವಿಕುಮಾರ್ ಹೇಳಿದರು.
ರಾಜ್ಯಬಾಲ ಭವನ ಸೊಸೈಟಿ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಬಾಲ ಭವನ ಸಮಿತಿಗಳ ಸಹಯೋಗದಲ್ಲಿ ಶನಿವಾರ ನಗರದ ರೋಟರಿ ವಿದ್ಯಾಲಯದಲ್ಲಿ ಆಯೋಜಿಸಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಓದಿನ ಜತೆಗೆ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದಕ್ಕಿಂತ ಭಾಗವಹಿಸುವುದು ಬಹಳ ಮುಖ್ಯ. ಮಕ್ಕಳಿಗೆ ಚಿತ್ರಕಲೆ, ಗಾಯನ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಗುತ್ತಿದೆ. ಪಠ್ಯೇತರ ಚಟುವಟಿಕೆಗಳಿಂದ ಮ ನಸ್ಸಿನ ಏಕಾಗ್ರತೆ ಮತ್ತು ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದರು.
ಶಿಶು ಅಭಿವÊದ್ಧಿ ಯೋಜನಾಽಕಾರಿ ವೀಣಾ ಮಾತನಾಡಿ, ರಾಜ್ಯದಾದ್ಯಂತ ಕಲಾ ಪ್ರತಿಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಮಕ್ಕಳಲ್ಲಿ ಅಡಗಿರುವ ಕಲೆ ಗುರುತಿಸಿ, ಪ್ರೋತ್ಸಾಹಿಸಲು ಸಹಕಾರಿಯಾಗಿದೆ. ಶಾಲೆಯಲ್ಲಿ ಪಾಠದ ಜತೆಗೆ
ಸÊಜನಾತ್ಮಕ ಚಟುವಟಿಕೆಗಳಿಗೂ ವೇದಿಕೆ ಕಲ್ಪಿಸಲಾಗಿದೆ ಎಂದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎಸ್. ಸಿದ್ದರಾಜು ಮಾತನಾಡಿ, ಬೆಳೆಯುವ ಸಿರಿ ಮೊ ಳಕೆಯಲ್ಲಿ ಎನ್ನುವ ಹಾಗೆ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವ ಕೆಲಸ ರಾಜ್ಯಬಾಲ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆಯಿಂದ ನಡೆಸುತ್ತಿರುವುದು ಉತ್ತಮ ಕೆಲಸ ಎಂದರು.
ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಪರ್ಧಾ ವಿಜೇತರಿಗೆ ಬಹು ಮಾನ, ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು. ಮಹಿಳಾ ಮೇಲ್ವಿಚಾರಕಿ ಪಾವನ, ಸಿರಿ ಸಂಪಿಗೆ ಸಂಸ್ಥೆ ಸಂಪನ್ಮೂಲ ವ್ಯಕ್ತಿ ಕೆ. ಪವಿತ್ರಾ ತೀರ್ಪುಗಾರರಾಗಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಉಮಾ ದೇವಿ ಇತರರು ಇದ್ದರು.